ರಾಜ್ಯಾದ್ಯಂತ ಕಾಗದ ರಹಿತ ಕಚೇರಿ ವ್ಯವಸ್ಥೆ

ಈ ಸುದ್ದಿಯನ್ನು ಶೇರ್ ಮಾಡಿ

Kagodu-Timmappa-Session

ಬೆಳಗಾವಿ, ನ.30-ಆಡಳಿತವನ್ನು ಸಂಪೂರ್ಣವಾಗಿ ಪಾರದರ್ಶಕವಾಗಿಸುವ ಸದುದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕುಗಳಲ್ಲಿ ಕಾಗದ ರಹಿತ ಕಚೇರಿ ವ್ಯವಸ್ಥೆಯನ್ನು ವಿಸ್ತರಣೆ ಮಾಡುವುದಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಿಧಾನಪರಿಷತ್ತಿಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‍ನ ಅಪ್ಪಾಜಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಗದ ರಹಿತ ಕಚೇರಿ ವ್ಯವಸ್ಥೆ ಜಾರಿಯಾಗಿದೆ. ಆದರೆ ಕೆಲವು ಜಿಲ್ಲಾ ಮತ್ತು ತಾಲೂಕು ಕಚೇರಿಗಳಲ್ಲಿ ಈ ವ್ಯವಸ್ಥೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಆದಷ್ಟು ಶೀಘ್ರದಲ್ಲೇ ಕಾಗದ ರಹಿತ ಕಚೇರಿ ಜಾರಿಯಾಗಲಿದ್ದು, ಇದರಿಂದ ಕೇವಲ ರೈತರಿಗಷ್ಟೇ ಅಲ್ಲದೆ, ಸಾರ್ವಜನಿಕರಿಗೂ ಉಪಯೋಗವಾಗಲಿದೆ ಎಂದರು.

ಅರ್ಜಿಗಳು ಸೇರಿದಂತೆ ಇನ್ನಿತರ ದಾಖಲೆಗಳನ್ನು ತಂತ್ರಾಂಶದ ಮೂಲಕ ಕಂಪ್ಯೂಟರ್‍ಗಳಲ್ಲಿ ಡಿಜಿಟಲ್ ರೂಪದಲ್ಲಿ ಶೇಖರಣೆ ಮಾಡುವುದರಿಂದ ಯಾವುದೇ ಕಡತ ನಾಶ ಅಥವಾ ಕಣ್ಮರೆಯಾಗುವ ಸಾಧ್ಯತೆ ಇರುವುದಿಲ್ಲ. ಇದರಿಂದ ಡಿಜಿಟಲ್ ಕಾರ್ಡ್ ಬಳಸಿ ಸಹಿ ಮಾಡುವುದರಿಂದ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಇದಕ್ಕೆ ಬೇಕಾದ ಹಣಕಾಸು ವ್ಯವಸ್ಥೆಯನ್ನು ಒದಗಿಸುವುದಾಗಿ ಹೇಳಿದರು. ರಾಜ್ಯದಲ್ಲಿ ಈವರೆಗೆ 2,729 ಪೋಡಿಮುಕ್ತ ಗ್ರಾಮಗಳನ್ನು ಘೋಷಿಸಲಾಗಿದೆ. ಬ್ರಿಟಿಷರ ಕಾಲದಲ್ಲಿದ್ದ ಸಮೀಕ್ಷೆ ಭೂ ಮಂಜೂರಾತಿ ವಿಧಾನವನ್ನೇ ಇಲ್ಲಿಯವರೆಗೂ ಮುಂದುವರೆಸಿಕೊಂಡು ಬರಲಾಗಿದೆ. ರಾಜ್ಯ ಸರ್ಕಾರ ಇದಕ್ಕೆ ಕಾಯಕಲ್ಪ ನೀಡಲು ಮುಂದಾಗಿದೆ ಎಂದರು.

ಬಾಕಿ ಪೋಡಿ ಪ್ರಕರಣಗಳಲ್ಲಿ ಪ್ರತಿತಿಂಗಳು 23 ಕಡತಗಳನ್ನು ವಿಲೇವಾರಿ ಮಾಡುವಂತೆ ಕಡ್ಡಾಯವಾಗಿ ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಕಡಿಮೆ ಪ್ರಗತಿ ನೀಡಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು. ಈವರೆಗೆ 14,873 ಪ್ರಕರಣಗಳ ಜೊತೆಗೆ ಪ್ರತಿತಿಂಗಳು ಸರಾಸರಿ 2,500 ಪ್ರಕರಣಗಳು ಸ್ವೀಕೃತವಾಗುತ್ತಿವೆ. ಆದ್ಯತೆ ಮೇರೆಗೆ ಬಾಕಿ ಪ್ರಕರಣಗಳನ್ನು ವಿಲೇವಾರಿ ಮಾಡಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲಾಗುವುದು. ಯಾವುದೇ ಗ್ರಾಮದಲ್ಲೂ ಒಂದೇ ಒಂದು ಪೋಡಿ ಪ್ರಕರಣ ಇರದಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಈರುಳ್ಳಿ ಖರೀದಿ ಕೇಂದ್ರ ಸ್ಥಗಿತಕ್ಕೆ ಬಿಜೆಪಿ ವಿರೋಧ

ಬೆಳಗಾವಿ, ನ.30- ಈರುಳ್ಳಿ ಖರೀದಿ ಕೇಂದ್ರಗಳನ್ನು ಸ್ಥಗಿತಗೊಳಿಸಿರುವುದರಿಂದ ರೈತರಿಗೆ ತೊಂದರೆಯಾಗಿದ್ದು, ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಬಿಜೆಪಿ ಶಾಸಕ ಗೋವಿಂದಕಾರಜೋಳ ಆಗ್ರಹಿಸಿದರು. ಈರುಳ್ಳಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಈ ನಡುವೆ ಬೆಂಬಲ ಬೆಲೆಯಡಿ ಈರುಳ್ಳಿ ಖರೀಸುವ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ರೈತರು ಕಂಗಾಲಾಗಿ ಪ್ರತಿಭಟನೆ ಮಾರ್ಗ ಹಿಡಿದಿದ್ದಾರೆ. ಸರ್ಕಾರ ಕೂಡಲೇ ರೈತರ ಬೆಂಬಲಕ್ಕೆ ಬರಬೇಕೆಂದು ಒತ್ತಾಯಿಸಿದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin