ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಭಾರತಿಶೆಟ್ಟಿ ಅಧಿಕಾರ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

bjp

ಬೆಂಗಳೂರು, ನ.17- ಬಿಜೆಪಿ ಮಹಿಳಾ ಮೋರ್ಚಾ ನೂತನ ರಾಜ್ಯಾ ಧ್ಯಕ್ಷೆಯಾಗಿ ಮಾಜಿ ವಿಧಾನ ಪರಿಷತ್ ಸದಸ್ಯೆ ಭಾರತಿಶೆಟ್ಟಿ ಇಂದು ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷೆ ಭಾರತಿ ಮುಗ್ಧಂ ಅವರಿಂದ ಬಾವುಟ ಪಡೆಯುವುದರ ಮೂಲಕ ಭಾರತಿ ಶೆಟ್ಟಿ ಅಧಿಕಾರ ಸ್ವೀಕರಿಸಿದರು. ಮಾಜಿ ಉಪಮುಖ್ಯಮಂತ್ರಿ ಹಾಗೂ ಪಕ್ಷದ ಮುಖಂಡ ಆರ್.ಅಶೋಕ್, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್. ಆರ್.ಲೀಲಾ ಸೇರಿದಂತೆ ಮತ್ತಿತರರು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.  ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಭಾರತಿ ಶೆಟ್ಟಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು. ಮಹಿಳಾ ಕಾರ್ಯಕರ್ತರು ಸಕ್ರಿಯರಾಗಿ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಮನವಿ ಮಾಡಿದರು.

 
ಯಡಿಯೂರಪ್ಪ ನವರು ರಾಜ್ಯಾಧ್ಯಕ್ಷರಾಗಿ ಪಕ್ಷದಲ್ಲಿ ಅನೇಕ ಬದಲಾವಣೆ ತಂದಿದ್ದಾರೆ. ಸಂಘಟನೆ ಯಿಂದ ಮಾತ್ರ ಪಕ್ಷ ಅಧಿಕಾರಕ್ಕೆ ಬರ ಲು ಸಾಧ್ಯ. ಅವರ ನಾಯಕತ್ವದಲ್ಲಿ ನಾವು ಕೂಡ ಕೈ ಜೋಡಿಸಿದರೆ ಅಧಿಕಾರ ಹಿಡಿಯುವುದರಲ್ಲಿ ಯಾವ ಸಂದೇಹವೂ ಇಲ್ಲ ಎಂದು ಹೇಳಿದರು.
ಮಾಜಿ ಪ್ರಧಾನಿ ವಾಜಪೇಯಿ ಯವರಿಗೆ ಪಕ್ಷ ಅಧಿಕಾರದಲ್ಲಿಲ್ಲದಿದ್ದಾಗ ಏನು ಕೆಲಸ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದರು. ಈಗ ಯಡಿಯೂರಪ್ಪ ನವರು ಅಧಿಕಾರದಲ್ಲಿ ಇಲ್ಲದಿದ್ದರೂ ಹೋರಾಟ ಮಾಡುತ್ತಿದ್ದಾರೆ. ಮಹಿಳಾ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಸೇವೆ ಸಲ್ಲಿಸುವಂತೆ ಮನವಿ ಮಾಡಿದರು. ಯಡಿಯೂರಪ್ಪ ಮತ್ತು ಪ್ರಧಾನಿ ನರೇಂದ್ರಮೋದಿಯವರದು ಹೋರಾಟದ ಬದುಕು. ಅವರ ಮಾರ್ಗದರ್ಶನದಲ್ಲೇ ನಾವು ಕೂಡ ಮುನ್ನಡೆಯಬೇಕು. ಅಧಿಕಾರದ ಆಸೆಗೆ ಯಾರೊಬ್ಬರೂ ಬಲಿಯಾಗಬಾರದು ಎಂದು ಸಲಹೆ ಮಾಡಿದರು.
ಮಹಿಳಾ ಮೋರ್ಚಾ ಇಂದು ಪ್ರಭಾವಿಯಾಗಲು ಅನೇಕ ತಾಯಂದಿರು ಶ್ರಮಿಸಿದ್ದಾರೆ. ಅವರ ಮಾರ್ಗದರ್ಶನದಲ್ಲೇ ನಾವೂ ಕೂಡ ಮುನ್ನಡೆಯಬೇಕು. ಏಳು ವರ್ಷಗಳ ನಂತರ ಅಧ್ಯಕ್ಷರಾಗಲು ಅವಕಾಶ ಸಿಕ್ಕಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಿರ್ಗಮಿತ ಅಧ್ಯಕ್ಷೆ ಭಾರತಿ ಮುಗ್ದಂ ಮಾತನಾಡಿ, ನನಗೆ ಸಿಕ್ಕ ಅವಧಿಯಲ್ಲಿ ಪ್ರಾಮಾಣಿಕವಾಗಿ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಈಗ ಮಾತೃ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯಾಧ್ಯಕ್ಷರು ನೇಮಿಸಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು ಎಂದರು.  ನಮ್ಮ ಪಕ್ಷದಲ್ಲಿರುವವರು ಹೋರಾಟದ ಹಿನ್ನೆಲೆಯಿಂದ ಬಂದವರು. ಇದೇ ರೀತಿ ರಾಜಕೀಯಕ್ಕೆ ಬಂದಿರುವ ಮಹಿಳೆಯರು ಹೋರಾಟ ಮಾಡುವ ಮೂಲಕ ಪಕ್ಷ ಸಂಘಟನೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು.

► Follow us on –  Facebook / Twitter  / Google+

Facebook Comments

Sri Raghav

Admin