ರಾಜ್ಯ ವಿಧಾನಸಭೆ ಚುನಾವಣೆ ಕಣದಲ್ಲಿ ಒಟ್ಟು 2,655 ಅಭ್ಯರ್ಥಿಗಳು, 219 ಮಹಿಳೆಯರು

ಈ ಸುದ್ದಿಯನ್ನು ಶೇರ್ ಮಾಡಿ

BJI-JDS-Congress
ಬೆಂಗಳೂರು, ಏ.28-ರಾಜ್ಯ ವಿಧಾನಸಭೆ ಚುನಾವಣಾ ಕಣದ 224 ಕ್ಷೇತ್ರಗಳಲ್ಲಿ ಒಟ್ಟು 2,655 ಅಭ್ಯರ್ಥಿಗಳು ಉಳಿದಿದ್ದು, 2,436 ಮಂದಿ ಪುರುಷರು ಹಾಗೂ 219 ಮಂದಿ ಮಹಿಳೆಯರು ಸ್ಪರ್ಧೆಗಿಳಿದಿದ್ದಾರೆ. ಈ ಬಾರಿ 1155 ಮಂದಿ ಪಕ್ಷೇತರ ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.ಆದರೆ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ.

ಕಳೆದ 2013ರ ವಿಧಾನಸಭೆ ಚುನಾವಣೆಯಲ್ಲಿ 2,948 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 2,772 ಪುರುಷರು ಹಾಗೂ 175 ಮಂದಿ ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 1217 ಮಂದಿ ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಒಟ್ಟು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಅದೇ ರೀತಿ ಮಹಿಳಾ ಅಭ್ಯರ್ಥಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಪುರುಷ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಅದೇ ರೀತಿ ಪಕ್ಷೇತರ ಅಭ್ಯರ್ಥಿಗಳ ಸಂಖ್ಯೆಯಲ್ಲೂ ಇಳಿಮುಖವಾಗಿರುವುದನ್ನು ಗಮನಿಸಬಹುದು.

ನಾಮಪತ್ರ ವಾಪಸ್ ಪಡೆಯಲು ನಿನ್ನೆಯವರೆಗೂ ಅವಕಾಶ ನೀಡಲಾಗಿತ್ತು. 583 ಮಂದಿ ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. 3,509 ಮಂದಿ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರಗಳ ಪರಿಶೀಲನೆ ಸಂದರ್ಭದಲ್ಲಿ 271 ನಾಮಪತ್ರಗಳು ತಿರಸ್ಕøತಗೊಂಡಿದ್ದವು. ಅಂತಿಮವಾಗಿ ಚುನಾವಣಾ ಕಣದಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ 224 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿದೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷ 222 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಜೆಡಿಎಸ್ 201 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿದೆ. ಜೆಡಿಎಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಬಿಎಸ್‍ಪಿ 18 ಕ್ಷೇತ್ರಗಳಲ್ಲಿ, ಸಿಪಿಐ-2, ಸಿಪಿಐ(ಎಂ)-19, ಎನ್‍ಸಿಪಿ-14, ನೋಂದಾಯಿತ ಇತರೆ ಪಕ್ಷಗಳಿಂದ 800 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಅತಿ ಹೆಚ್ಚು ಸ್ವತಂತ್ರ ಅಭ್ಯರ್ಥಿಗಳು ಈ ಬಾರಿ ಸ್ಪರ್ಧೆಗಳಿದಿದ್ದು, 1155 ಮಂದಿ ಪಕ್ಷೇತರರು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಮೇ 12 ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ಕಣ ರಂಗೇರತೊಡಗಿದೆ. ರಾಜಕೀಯ ಪಕ್ಷಗಳ ನಾಯಕರು, ಮುಖಂಡರು ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಹರಸಾಹಸ ಮಾಡುತ್ತಿದ್ದಾರೆ. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಕೂಡ ಮತದಾರರನ್ನು ಆಕರ್ಷಿಸಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಚುನಾವಣಾ ಪ್ರಚಾರದ ಕಾವು ಏರತೊಡಗಿದೆ. ಎಲ್ಲಾ ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

Facebook Comments

Sri Raghav

Admin