ರಾಜ್ಯ ಸರ್ಕಾರದ ನೀತಿಗಳಿಂದ ಪ್ರಕೃತಿಯ ಮೇಲೆ ದೌರ್ಜನ್ಯ ನಡೆಯುತ್ತಿದೆ : ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬಳ್ಳಾರಿ,ಫೆ.26-ಸುಮಾರು 1300 ವರ್ಷಗಳ ಇತಿಹಾಸವಿರುವ ಜಿಲ್ಲೆಯ ಸಂಡೂರಿನ ಕುಮಾರಸ್ವಾಮಿ ದೇವಾಲಯ ಅವನತಿ ಅಂಚಿನತ್ತ ಸಾಗಿದ್ದು, ಇದರ ರಕ್ಷಣೆಯಾಗಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ದೇವಾಲಯಕ್ಕೆ 1300 ವರ್ಷಗಳ ಇತಿಹಾಸವಿದೆ. ಅದರೆ ರಾಜ್ಯ ಸರ್ಕಾರದ ಕೆಲ ನೀತಿಗಳಿಂದ ಪ್ರಕೃತಿಯ ಮೇಲೆ ದೌರ್ಜನ್ಯ ನಡೆಯುತ್ತಿದೆ. ಗಣಿಗಾರಿಕೆಯಿಂದ ದೇವಾಲಯದ ಕಟ್ಟಡಕ್ಕೆ ಹಾನಿಯಾಗಿದೆ. ನಾನೇ ಖುದ್ದು ಪರಿಶೀಲನೆ ಮಾಡಿದ್ದೇನೆ. ಕಟ್ಟಡ ಹಾಳಾಗಿ ಹೋಗಿದೆ.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ದೇವಾಲಯದ ಜೀರ್ಣೋದ್ಧಾರಕ್ಕೆ ಅಗತ್ಯ ಕ್ರಮ ಕೈಗೊಳಲ್ಲಾಗುವುದು ಎಂದರು.  ಗಣಿ ಕಾಶಿಯಲ್ಲಿ ವಿಕಾಸಪರ್ವ ಆಯೋಜನೆ ಮಾಡಲಾಗಿದ್ದು ,ಸ್ಕಂದ ನಗರಿಯಲ್ಲಿ ಜೆಡಿಎಸ್ ಕಲರವ ಜೋರಾಗಿದೆ. ಕುಮಾರಸ್ವಾಮಿ ಬೆಂಬಲಕ್ಕೆ ಕಾರ್ಯಕರ್ತರ ಪಡೆ ಹುಮ್ಮಸ್ಸಿನಿಂದ ಪಾಲ್ಗೊಂಡಿದ್ದರು. ರೈತರು ಸಹ ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin