ರಾಣೆಬೆನ್ನೂರು ಕ್ಷೇತ್ರ ಸ್ಪೀಕರ್ ಕೋಳಿವಾಡಗೆ ಸೋಲು

ಈ ಸುದ್ದಿಯನ್ನು ಶೇರ್ ಮಾಡಿ

K-B-Koliwada

ಬೆಂಗಳೂರು, ಮೇ 15-ಸತತ ಆರು ಬಾರಿ ಜಯಗಳಿಸಿ ಸ್ಪೀಕರ್ ಆಗಿದ್ದ ಕೆ.ಬಿ.ಕೋಳಿವಾಡ ಅವರನ್ನು ಮಣಿಸಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆರ್.ಶಂಕರ್ ಗೆಲುವಿನ ನಗೆ ಬೀರಿದ್ದಾರೆ.   ಕಾಂಗ್ರೆಸ್‍ನ ಅತ್ಯಂತ ಹಿರಿಯ ಶಾಸಕರೂ ಆದ ಕೆ.ಬಿ.ಕೋಳಿವಾಡ ಅವರಿಗೆ ಪಕ್ಷೇತರ ಅಭ್ಯರ್ಥಿಯಿಂದ ಸೋಲುಂಟಾಗಿ ತೀವ್ರ ಮುಖಭಂಗವಾಗಿದೆ. ಕಳೆದ ಬಾರಿ ಈ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದ ಆರ್.ಶಂಕರ್ ಅವರು ಕೆಲವೇ ಮತಗಳ ಅಂತರದಿಂದ ಸೋತಿದ್ದರು. ಸೋತ ನಂತರವೂ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಈ ಬಾರಿ ಮತ್ತೆ ಪಕ್ಷೇತರರಾಗಿ ಸ್ಪರ್ಧಿಸಿ ಭಾರೀ ಜಯಗಳಿಸುವ ಮೂಲಕ ತಮ್ಮ ಗುರಿಯನ್ನು ಸಾಧಿಸಿದ್ದಾರೆ. [ #ಕನ್ನಡಿಗರ ತೀರ್ಪು : ಕರ್ನಾಟಕ ವಿಧಾನಸಭಾ ಚುನಾವಣೆ -2018 ಫಲಿತಾಂಶ (Live) ]

Facebook Comments

Sri Raghav

Admin