ರಾಮನಗರ ಜಿಲ್ಲೆಯ ನರಿಕಲ್ಲು ಗುಡ್ಡ ಪ್ರದೇಶದಲ್ಲಿ 12 ಕಾಡಾನೆಗಳ ಹಿಂಡು ಪ್ರತ್ಯಕ್ಷ

ಈ ಸುದ್ದಿಯನ್ನು ಶೇರ್ ಮಾಡಿ

Elephants-in

ರಾಮನಗರ, ಜ.11- ಜಿಲ್ಲೆಯ ತೆಂಗಿನಕಲ್ಲು ಅರಣ್ಯ ವ್ಯಾಪ್ತಿಯ ನರಿಕಲ್ಲು ಗುಡ್ಡ ಪ್ರದೇಶದಲ್ಲಿ 12 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ವಿರೂಪಾಕ್ಷಿಪುರ ಬಳಿಯ ನರಿಕಲ್ಲುಗುಡ್ಡ ತೆಂಗಿನಕಲ್ಲು ಅರಣ್ಯ ವ್ಯಾಪ್ತಿಯಲ್ಲಿ ಮರಿ ಆನೆ ಸೇರಿದಂತೆ 12 ಆನೆಗಳು ಬೀಡು ಬಿಟ್ಟಿದ್ದು, ರೈತರು ಜಮೀನಿಎ ಹೋಗದಂತೆ ಅರಣ್ಯಾಧಿಕಾರಿಗಳು ಸೂಚಿಸಿದ್ದಾರೆ. ಎಂಟು ಮಂದಿ ಅರಣ್ಯ ಸಿಬ್ಬಂದಿ ಮತ್ತು ಸ್ಥಳೀಯ ಗ್ರಾಮಸ್ಥರ ನೆರವಿನೊಂದಿಗೆ ಅರಣ್ಯ ಸಿಬ್ಬಂದಿ ಆನೆಗಳನ್ನು ಕಾಡಿಗಟ್ಟುವ ಪ್ರಯತ್ನ ಮುಂದುವರಿಸಿದ್ದಾರೆ. ಕಬ್ಬಾಳ ಅರಣ್ಯ ಪ್ರದೇಶದಲ್ಲಿ ಆನೆಗಳ ಹಾವಳಿ ಹೆಚ್ಚುತ್ತಿದೆ. ಸದ್ಯ 12 ಆನೆಗಳು ಈ ಪ್ರದೇಶದಲ್ಲಿ ಬೀಡು ಬಿಟ್ಟಿದ್ದು, ಇವುಗಳನ್ನು ಅರಣ್ಯಕ್ಕೆ ಅಟ್ಟುವ ಕೆಲಸ ಮಾಡುತ್ತಿದ್ದೇವೆ ಎಂದು ಅರಣ್ಯಾಧಿಕಾರಿ ಮಲ್ಲೇಶ್ ತಿಳಿಸಿದ್ದಾರೆ. ಅವುಗಳನ್ನು ಬೆದರಿಸುವ, ರೊಚ್ಚಿಗೆಬ್ಬಿಸುವ ಕೆಲಸ ಮಾಡದಂತೆ ರೈತರಿಗೆ, ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin