ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆಗಮನದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಈ ಸುದ್ದಿಯನ್ನು ಶೇರ್ ಮಾಡಿ

mukharji
ಬೆಂಗಳೂರು,ಆ.27- ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರಪತಿಗಳು ಸಂಜೆ ರಾಜಾಜಿನಗರದ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಅಕ್ಷಯ ಪಾತ್ರೆ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದು ಈ ಪ್ರದೇಶದ ಸುತ್ತಮುತ್ತ ಪೊಲೀಸ್ ಭದ್ರತೆ ಒದಗಿಸಲಾಗಿದೆ.  ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್, ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಇಸ್ಕಾನ್‌ಗೆ ಭೇಟಿ ನೀಡಿ ಭದ್ರತೆಯನ್ನು ಪರಿಶೀಲಿಸಿದರು.  ಭದ್ರತೆಗಾಗಿ 1500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ರಾಷ್ಟ್ರಪತಿಗಳು ಸಂಚರಿಸುವ ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಿ ಟ್ರಾಫಿಕ್ ಜಾಮ್ ಆಗದಂತೆ ನಿಗಾವಹಿಸಲಾಗಿದೆ.

ಇಸ್ಕಾನ್‌ಗೆ ಕೇವಲ ಆಹ್ವಾನಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಎರಡು ದಿನಗಳ ಕಾಲ ರಾಷ್ಟ್ರಪತಿಗಳು ನಗರದಲ್ಲಿ ತಂಗಲಿದ್ದು , ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹಾಗಾಗಿ ರಾಜಭವನದ ಸುತ್ತಮುತ್ತಲೂ ಸಹ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನಾಳೆ ನಗರದ ನ್ಯಾಷನಲ್ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ 24ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾಲ್ಗೊಳ್ಳಲಿದ್ದಾರೆ. ಅವರು ಬಂದು ಹೋಗುವವರೆಗೂ ಬಿಗಿ ಪೊಲೀಸ್ ಭದ್ರತೆ ಇರುತ್ತದೆ.

► Follow us on –  Facebook / Twitter  / Google+

Facebook Comments

Sri Raghav

Admin