ರಾಷ್ಟ್ರಪತಿ ಭೇಟಿಯಾದ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

siddu

ನವದೆಹಲಿ, ಸೆ.3- ಬೆಂಗಳೂರಿನಲ್ಲಿ ನಡೆದ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆಹ್ವಾನ ನೀಡಿದ್ದಾರೆ.  ನವದೆಹಲಿಯಲ್ಲಿಂದು ರಾಷ್ಟ್ರಪತಿ ಭವನದಲ್ಲಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ, ಡಿ.29ರಿಂದ ಜ.6ರ ವರೆಗೂ ರಾಷ್ಟ್ರೀಯ ಸ್ಪೋಟ್ಸ್ ಮತ್ತು ಗೈಡ್ಸ್ ಸಮಾವೇಶ ಮೈಸೂರಿನಲ್ಲಿ ನಡೆಯಲಿದೆ. ಇದರಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿರುವುದಾಗಿ ಹೇಳಿದರು. ಜತೆಗೆ ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯ ಆರಂಭಿಸುತ್ತಿದೆ.

ಈ ವಿಶ್ವ ವಿದ್ಯಾನಿಲಯಗಳ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಲು ರಾಷ್ಟ್ರಪತಿಯವರನ್ನು ಆಹ್ವಾನಿಸಿದ್ದೇವೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಸರ್ಕಾರ ಹಾಗೂ ತಮ್ಮ ವಿರುದ್ಧ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮಾಡುತ್ತಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಿದ್ದರಾಮಯ್ಯ ನಿರಾಕರಿಸಿದರು.
ಸಂಜೆ 4 ಗಂಟೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂ ಅವರನ್ನು ಭೇಟಿ ಮಾಡಿ ನಿಗಮ-ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿ ಕುರಿತು ಚರ್ಚೆ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.  ಇದಕ್ಕೂ ಮುನ್ನ ಬೆಳಗ್ಗೆ ಕಾನೂನು ತಜ್ಞ ಪಾಲಿ ನಾರಿಮನ್ ಅವರನ್ನು ಭೇಟಿ ಮಾಡಿ ಕರ್ನಾಟಕದ ಜಲ ವಿವಾದಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

► Follow us on –  Facebook / Twitter  / Google+

Facebook Comments

Sri Raghav

Admin