ರಾಷ್ಟ್ರಪಿತ ಮಹಾತ್ಮ ಗಾಂಧಿ 70ನೇ ಪುಣ್ಯತಿಥಿ : ಗಣ್ಯರಿಂದ ಶ್ರದ್ಧಾಂಜಲಿ

ಈ ಸುದ್ದಿಯನ್ನು ಶೇರ್ ಮಾಡಿ

Gandhiji--01
ನವದೆಹಲಿ, ಜ.30-ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 70ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಬಾಪುವಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತಿತರ ಧುರೀಣರು ರಾಷ್ಟ್ರಪಿತನಿಗೆ ಗೌರವಾಂಜಲಿ ಸಮರ್ಪಿಸಿದ್ದಾರೆ.

ಪುಣ್ಯತಿಥಿ ಸಂದರ್ಭದಲ್ಲಿ ಬಾಪು ಅವರನ್ನು ನಾನು ಸ್ಮರಿಸುತ್ತೇನೆ. ನಮ್ಮ ದೇಶಕ್ಕಾಗಿ ತಮ್ಮ ಅಮೂಲ್ಯ ಪ್ರಾಣಗಳನ್ನು ಬಲಿದಾನ ಮಾಡಿದ ಎಲ್ಲ ಹುತಾತ್ಮರಿಗೆ ನಾವು ತಲೆಬಾಗಬೇಕು. ನಮ್ಮ ರಾಷ್ಟ್ರಕ್ಕಾಗಿ ಅವರ ಸೇವೆ ಮತ್ತು ಸಮರ್ಪಣಾ ಮನೋಭಾವ ಹಾಗೂ ಕೆಚ್ಚೆದೆಯ ಸ್ಥೈರ್ಯವನ್ನು ನಾವೆಲ್ಲರೂ ಸದಾ ಸ್ಮರಿಸಬೇಕೆಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಭಾರತೀಯರ ಪಾಲಿಗೆ 30ನೇ ಜನವರಿ 1948 ಘೋರ ದುರಂತದ ದಿನವಾಯಿತು. ಸ್ವಾತಂತ್ರ್ಯ ಆಂದೋಲನದಲ್ಲಿ ರಾಜಕೀಯ ಮತ್ತು ಅಧ್ಯಾತ್ಮಿಕ ನಾಯಕರಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ನಾಥುರಾಮ್ ಗೊಡ್ಸೆ ಗುಂಡಿಗೆ ಬಲಿಯಾದರು.
ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ ದೊರಕಿಸಿಕೊಟ್ಟ ಬಾಪು ಹತ್ಯೆಗೀಡಾದರು. ಸತ್ಯ, ಅಹಿಂಸೆ ಮತ್ತು ಅಸಹಕಾರ ಚಳವಳಿಯಿಂದ ಜಗತ್ತಿನಾದ್ಯಂತ ಮಹಾತ್ಮ ಎಂದೇ ಚಿರಪರಿಚಿತರಾಗಿದ್ದ ಗಾಂಧಿ ಅವರನ್ನು ಹಿಂದು ರಾಷ್ಟ್ರೀಯವಾದ ಕಾರ್ಯಕರ್ತ ನಾಥುರಾಮ್ ಗೊಡ್ಸೆ ಗುಂಡಿಕ್ಕಿ ಹತ್ಯೆ ಮಾಡಿದ.

ನವದೆಹಲಿಯ ಬಿರ್ಲಾ ಭವನದ ಮೈದಾನದಲ್ಲಿ ತಮ್ಮ ರಾತ್ರಿಯ ನಡಿಗೆಯಲ್ಲಿ ತೊಡಗಿದ್ದ ಬಾಪು ಅವರನ್ನು ಗೊಡ್ಸೆ ಕೊಂದು ಹಾಕಿದ. ಭಾರತದ ಮುಸಲ್ಮಾರ ಪರವಾಗಿ ಗಾಂಧಿ ತಾರತಮ್ಯ ಮಾಡುತ್ತಿದ್ದಾರೆ ಎಂಬುದು ಗೊಡ್ಸೆ ಆರೋಪವಾಗಿತ್ತು. 8ನೇ ನವೆಂಬರ್ 1949ರಲ್ಲಿ ಗೊಡ್ಸೆಯನ್ನು ನೇಣುಗಂಬಕ್ಕೆ ಏರಿಸಲಾಯಿತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin