ರಾಷ್ಟ್ರಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸ್ಟೀಲ್ ಬ್ರಿಡ್ಜ್ ಯೋಜನೆಗೆ ಮರುಜೀವ ..!

ಈ ಸುದ್ದಿಯನ್ನು ಶೇರ್ ಮಾಡಿ

Steel-Bridge-Bengaluru
ಬೆಂಗಳೂರು, ಡಿ.11-ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿ ಪ್ರತಿಪಕ್ಷಗಳ ಆರೋಪಕ್ಕೆ ತುತ್ತಾಗಿ ಸರ್ಕಾರದ ಮಹತ್ವಾಕಾಂಕ್ಷೆಯ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನೇ ಕೈಬಿಟ್ಟಿದ್ದ ಸರ್ಕಾರ ಮತ್ತೆ ಆ ಯೋಜನೆಗೆ ಮರುಜೀವ ನೀಡಲು ತೀರ್ಮಾನಿಸಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗ ಮಾತನಾಡಿ, ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಬಿಟ್ಟಿಲ್ಲ. ರಾಷ್ಟ್ರೀಯ ಹಸಿರು ಪೀಠ ತಡೆ ನೀಡಿದ್ದರಿಂದ ವಿಳಂಬವಾಗಿದೆ. ಇನ್ನೂ ಆ ಯೋಜನೆ ಜೀವಂತವಾಗಿದೆ. ಯೋಜನೆಯನ್ನು ಪುನರ್ ಪರಿಶೀಲಿಸಲಾಗುವುದು. ಸಂಚಾರ ದಟ್ಟಣೆ ನಿಯಂತ್ರಿಸಲು ಯೋಜನೆ ಅಗತ್ಯವಿದೆ. ಈ ಯೋಜನೆ ಸದ್ಯಕ್ಕೆ ಮುಂದೂಡಲಾಗಿದೆ. ಎನ್‍ಜಿಇಟಿ ತಡೆಯಾಜ್ಞೆ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಚುನಾವಣೆ ಬಳಿಕ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ ನಂತರ ಇದನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ಹೇಳಿದರು.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮೆಟ್ರೋ ಸಂಪರ್ಕ ಕಲ್ಪಿಸುವ ಕುರಿತು ತೀರ್ಮಾನಿಸಲಾಗುವುದು ಎಂದು ಹೇಳಿದರು. ಪ್ರಸಕ್ತ ಬೆಂಗಳೂರು ಉತ್ತರ-ದಕ್ಷಿಣ ಹಾಗೂ ಪೂರ್ವ-ಪಶ್ಚಿಮ ಜೋಡಿಸುವ ಎಲಿವೇಟೆಡ್ ಕಾರಿಡಾರ್ ಯೋಜನೆ ಕೈಗೆತ್ತಿಕೊಳ್ಳಲು ಸರ್ಕಾರ ಯೋಜನೆ ರೂಪಿಸುತ್ತಿದೆ. 25 ಸಾವಿರ ಕೋಟಿ ಅಂದಾಜು ವೆಚ್ಚದ ಈ ಯೋಜನೆ ಭಾಗವಾಗಿ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದು ಟೋಲ್ ಯೋಜನೆ, ಸಿಬಿಡಿ ಪ್ರದೇಶಕ್ಕೆ ವಾಹನ ದಟ್ಟಣೆ ತಪ್ಪಿಸಲು ಈ ಯೋಜನೆ ಅನಿವಾರ್ಯ ಇದಲ್ಲದೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಾಗವಾರ ನಡುವೆ ಮೆಟ್ರೋ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಜಾರ್ಜ್ ತಿಳಿಸಿದರು.

Facebook Comments

Sri Raghav

Admin