ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ 19,423 ಹುದ್ದೆಗಳ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

Bank-Jobs

ರಾಮನಗರ, ಆ.21- ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್ ರವರಿಂದ 19 ವಿವಿಧ ರಾಷ್ಟ್ರೀಯ ಬ್ಯಾಂಕುಗಳ ಕರ್ನಾಟಕದಲ್ಲಿನ 1467 ಹುದ್ದೆ ಸೇರಿದಂತೆ ಒಟ್ಟು 19,423 ಗುಮಾಸ್ತ ವೃಂದದ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಯಾವುದೇ ಪದವಿ ತೇರ್ಗಡೆ ಹೊಂದಿದ್ದು, 18 ರಿಂದ 28 ವರ್ಷದವರು (ಪ.ಜಾ/ಪ.ಪಂ/ಒ.ಬಿ.ಸಿ./ಅಂ.ವಿ./ಮಾ.ಸೈನಿಕರಿಗೆ ನಿಯಮಾನುಸಾರ ಅಡಿಲಿಕೆ ಇರುತ್ತದೆ). 600 ರೂ. ಅರ್ಜಿ ಶುಲ್ಕ ಪಾವತಿಸಿ (ಪ.ಜಾ/ಪ.ಪಂ/ಅಂ.ವಿ./ಮಾ.ಸೈನಿಕರಿಗೆ ರೂ 100). ಅರ್ಜಿ ಪಡೆದು ಸೆ.12ರೊಳಗೆ ಸಲ್ಲಿಸುವಂತೆ ಕೋರಲಾಗಿದೆ.

ಆಸಕ್ತರು ಅರ್ಜಿ ಸಲ್ಲಿಕೆಗೆ ವೆಬ್ಸೈಟ್  www.ibps.in   ಹಾಗೂ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಉದ್ಯೋಗ ವಿನಿಮಯ ಕಚೇರಿಯಲ್ಲಿ ಲಭ್ಯವಿರುವ ಇಂಟರ್ನೆಟ್ ಸೇವೆ ಪಡೆದು ಸಹ ಅರ್ಜಿ ಸಲ್ಲಿಸಬಹುದಾಗಿದೆ.  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸ್ಟಡಿ ಸರ್ಕಲ್ ಕಾರ್ಯಕ್ರಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನೇಮಕಾತಿ ಹಂತದಲ್ಲಿ ನಡೆಸಲಾಗುವ ಲಿಖಿತ ಪರೀಕ್ಷೆಗೆ ಉಚಿತವಾಗಿ ಪರೀಕ್ಷಾ ಪೂರ್ವ ತರಬೇತಿ ತರಗತಿಗಳನ್ನು ಏರ್ಪಡಿಸುವುದರಿಂದ ಅರ್ಜಿ ಸಲ್ಲಿಸಿದ ತಕ್ಷಣ ಅಭ್ಯರ್ಥಿಗಳು ರಾಮನಗರ ಕಂದಾಯ ಭವನದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ತಪ್ಪದೆ ಹೆಸರು ನೀಡುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin