ರಾಷ್ಟ್ರ ಪ್ರಶಸ್ತಿ ಪುರಸ್ಕಂತ ಲೋಕೇಶ್ವರಾಚಾರ್‍ಗೆ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

chikkamangaluru6
ಚಿಕ್ಕಮಗಳೂರು, ಅ.1- ರಾಷ್ಟ್ರ ಪ್ರಶಸ್ತಿ ಪುರಸ್ಕಂತ  ಶಿಕ್ಷಕ ಎಸ್.ಇ.ಲೋಕೇಶ್ವರಾಚಾರ್ ಅವರನ್ನು ಅವರ ಮಾತೃ ಸಂಸ್ಥೆ ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಆತ್ಮೀಯವಾಗಿ ಅಭಿನಂದಿಸಲಾಯಿತು.ಜಿಲ್ಲಾ ಕಾಂಗ್ರೇಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಹಗಲಿರುಳೆನ್ನದೆ ದುಡಿಯುತ್ತಿರುವ ಲೋಕೇಶ್ವರಾಚಾರ್ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿರುವುದು ಶಾಲೆಯ ಗೌರವವನ್ನು ಹೆಚ್ಚಿಸಿದೆ ಎಂದರು.
ಮುಖ್ಯ ಶಿಕ್ಷಕಿ ಗೀತಾ ಮಾತನಾಡಿ, ಲೋಕೇಶ್ವರಾಚಾರ್ ಅವರಿಗೆ ರಾಷ್ಟ್ರಪ್ರಶಸ್ತಿ ಲಭಿಸಿರುವುದು ಶಾಲೆಗೆ ಹೆಮ್ಮೆ ತಂದಿದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಲೋಕೇಶ್ವರಾಚಾರ್ ಪ್ರಶಸ್ತಿ ಬಂದಿರುವುದು ತಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥಗೌಡ, ಖಜಾಂಚಿ ಪಾಲಯ್ಯ, ಜಿಲ್ಲಾ ವಿಶ್ವಕರ್ಮ ನೌಕರರ ಸಂಘದ ಅಧ್ಯಕ್ಷ ಈಶ್ವರಯ್ಯ ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin