ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿಕುನ್‍ಗುನ್ಯಾಕ್ಕೆ 12 ಮಂದಿ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

12Kiled

ನವದೆಹಲಿ, ಸೆ.15-ಮಹಾಮಾರಿಯಂತೆ ಕಾಡುತ್ತಿರುವ ಚಿಕುನ್‍ಗುನ್ಯಾ ರಾಜಧಾನಿಯಲ್ಲಿ ಸತ್ತವರ ಸಂಖ್ಯೆ 12ಕ್ಕೇರಿದ್ದು, ಒಂದು ಸಾವಿರಕ್ಕೂ ಹೆಚ್ಚು ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚುತ್ತಿರುವ ಸಾವುಗಳು ಮತ್ತು ರೋಗಿಗಳ ಸಂಖ್ಯೆ ಕುರಿತು ವರದಿಯೊಂದನ್ನು ನೀಡುವಂತೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಮಾರಕ ಡೆಂಘಿ ಮತ್ತು ಚಿಕುನ್‍ಗುನ್ಯಾ ದೆಹಲಿಯನ್ನು ಹೆಮ್ಮಾರಿಯಂತೆ ಬಾಧಿಸುತ್ತಿದೆ. ಅಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ಯಲ್ಲಿ (ಎಐಐಎಂಎಸ್) ಚಿಕಿತ್ಸೆ ಪಡೆಯುತ್ತಿದ್ದ ಏಳು ಮಂದಿ ನಿನ್ನೆ ಮೃತಪಟ್ಟಿದ್ದು, ಸತ್ತವರ ಸಂಖ್ಯೆ 12ಕ್ಕೇರಿದೆ.

ದೆಹಲಿಯಲ್ಲಿ ಚಿಕನ್‍ಗುನ್ಯಾ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿದ್ದು, 1,000ಕ್ಕೂ ಹೆಚ್ಚು ಮಂದಿಯಲ್ಲಿ ಈ ರೋಗ ಕಾಣಿಸಿಕೊಂಡಿದೆ. ರಾಜಧಾನಿಯಲ್ಲಿರುವ ಬಹುತೇಕ ಎಲ್ಲ ಆಸ್ಪತ್ರೆಗಳು ಸೋಂಕು ಪೀಡಿತ ರೋಗಿಗಳಿಂದ ತುಂಬಿ ತುಳುಕುತ್ತಿವೆ.   ಚಿಕುನ್‍ಗುನ್ಯಾದಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಸ್ತತ ವರದಿ ನೀಡುವಂತೆ ದೆಹಲಿಯ ಅಪ್ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮತ್ತು ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.  ಎಲ್ಲ ಶಾಸಕರು ಮತ್ತು ಪಾಲಿಕೆ ಸದಸ್ಯರುಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಚಿಕುನ್‍ಗುನ್ಯಾ ಮತ್ತು ಡೆಂಘಿ ರೋಗಗಳ ವಿರುದ್ಧ ಹೋರಾಡುವಂತೆ ದೆಹಲಿ ಲೆಫಿನೆಂಟ್ ಗೌರ್ನರ್ ನಜೀಬ್ ಜಂಗ್ ಮತ್ತು ಜಲ ಸಂಪನ್ಮೂಲ ಸಚಿವ ಕಪಿಲ್ ಮಿಶ್ರಾ ಮನವಿ ಮಾಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin