ರಾಸಾಯನಿಕ ಅಸ್ತ್ರ ಬಳಸಿದರೆ ತಕ್ಕ ಶಾಸ್ತಿ : ಸಿರಿಯಾಗೆ ಅಮೆರಿಕ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

America--02-Trump

ವಾಷಿಂಗ್ಟನ್, ಏ.12-ಮತ್ತೆ ರಾಸಾಯನಿಕ ಅಸ್ತ್ರಗಳನ್ನು ಬಳಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಸಿರಿಯಾಗೆ ಅಮೆರಿಕ ಗಂಭೀರ ಎಚ್ಚರಿಕೆ ನೀಡಿದೆ. ಆದಾಗ್ಯೂ ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರ ವಿರುದ್ಧ ಹೋರಾಟವು ಅಮೆರಿಕದ ಮೊದಲ ಅದ್ಯತೆಯಾಗಿದೆ ಎಂದೂ ಸ್ಪಷ್ಟಪಡಿಸಲಾಗಿದೆ.  ಅಮೆರಿಕದ ರಕ್ಷಣಾ ಇಲಾಖೆಯ ಮುಖ್ಯಸ್ಥರಾಗಿ ತಮ್ಮ ಪ್ರಥಮ ಪೆಂಟಗನ್ (ರಕ್ಷಣಾ ಇಲಾಖೆ) ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಕ್ಷಣಾ ಸಚಿವ ಜಿಮ್ ಮ್ಯಾಟೀಸ್, ಸಿರಿಯಾ ಮತ್ತೆ ರಾಸಾಯನಿಕ ಅಸ್ತ್ರಗಳನ್ನು ಉಪಯೋಗಿಸಿದ್ದೇ ಆದರೆ ತಕ್ಕ ಶಾಸ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದರು. ಇದೇ ಕಾರಣಕ್ಕಾಗಿ ಸಿರಿಯಾದ ವಾಯುನೆಲೆ ಮೇಲೆ ಕಳೆದ ವಾರ ನಡೆದ ಕ್ಷಿಪಣಿ ದಾಳಿಯನ್ನು ಅವರು ಬಲವಾಗಿ ಸಮರ್ಥಿಸಿಕೊಂಡರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin