ರಾಹುಲ್ ಯೂಟರ್ನ್ ಆಗಿಲ್ಲ : ದಿಗ್ವಿಜಯ್ ಸಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

S-Digvijay-Singh

ನವದೆಹಲಿ, ಆ.25- ಆರ್ಎಸ್ಎಸ್ ಜತೆ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ಎಂಬ ತಮ್ಮ ಹೇಳಿಕೆಯಿಂದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ಗಾಂಧಿ ಹಿಂದೆ ಸರಿದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ಸಿಂಗ್ ಸ್ಪಷ್ಟಪಡಿಸಿದ್ದಾರೆ.  ಸುಪ್ರೀಂಕೋರ್ಟ್ನಲ್ಲಿ ರಾಹುಲ್ಗಾಂಧಿ ಅವರು ತಮ್ಮ ಹೇಳಿಕೆಗಳಿಗೆ ಯು ಟರ್ನ್ ಆಗಿದ್ದಾರೆ ಎಂಬುದನ್ನು ತಳ್ಳಿ ಹಾಕಿರುವ ಅವರು, ಸಂಘದೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಮಹಾತ್ಮಗಾಂಧಿ ಅವರನ್ನು ಹತ್ಯೆ ಮಾಡಿದ ಎಂಬ ಹೇಳಿಕೆಗೆ ರಾಹುಲ್ ಈಗಲೂ ಬದ್ಧವಾಗಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಅವರು, ಆರ್ಎಸ್ಎಸ್ ವಿಷಯದಲ್ಲಿ ರಾಹುಲ್ ಯು ಟರ್ನ್ ಆಗಿಲ್ಲ. ತಮ್ಮ ಹೇಳಿಕೆ ಮತ್ತು ನಿಲುವಿಗೆ ಅವರು ಬದ್ಧರಾಗಿದ್ದಾರೆ ಎಂದು ದಿಗ್ವಿಜಯ್ಸಿಂಗ್ ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin