ರಿಲ್ಯಾಕ್ಸ್ ಮೂಡ್‍ನಲ್ಲಿ ಸಿಎಂ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaih--01
ಮೈಸೂರು, ಮೇ 13- ಕಳೆದ ಎರಡು ತಿಂಗಳಿನಿಂದ ಸತತವಾಗಿ ಹಗಲು-ರಾತ್ರಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಮತದಾನ ಮುಗಿದ ನಂತರ ರಿಲ್ಯಾಕ್ಸ್ ಮೂಡ್‍ನಲ್ಲಿದ್ದಾರೆ. ಪ್ರತಿ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಮಕೃಷ್ಣನಗರದ ನಿವಾಸದ ಬಳಿ ಸದಾ ಜನ ಗಿಜಿಗುಡುತ್ತಿದ್ದರು. ಇಂದು ಮನೆ ಬಳಿ ಒಬ್ಬ ಮನುಷ್ಯನೂ ಕಾಣಬರುತ್ತಿಲ್ಲ.

ಇಂದು ಬೆಳಿಗ್ಗೆ ವರುಣಾ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಸಿದ್ದರಾಮಯ್ಯ ಅವರು ನಿನ್ನೆ ನಡೆದ ಮತದಾನದ ವಿವರ ಪಡೆದು ಸೋಲು-ಗೆಲುವಿನ ಲೆಕ್ಕಾಚಾರ ಹಾಕಿದರು. ಇಂದು, ನಾಳೆ ಎಲ್ಲೂ ಹೋಗದೆ ಮನೆಯಲ್ಲೇ ಇದ್ದು ವಿಶ್ರಾಂತಿ ಪಡೆಯುವುದಾಗಿ ಹೇಳಿದ ಸಿಎಂ, ಮೈಸೂರಿನ ಹೊರವಲಯದಲ್ಲಿರುವ ತಮ್ಮ ತೋಟದ ಮನೆಗೆ ತೆರಳಿದರು.

Facebook Comments

Sri Raghav

Admin