ರುದ್ರೇಶ್ ಹತ್ಯೆ  ಹಿಂದೆ ಕಾರ್ಪೊರೇಟರೊಬ್ಬರ ಕೈವಾಡ..?

ಈ ಸುದ್ದಿಯನ್ನು ಶೇರ್ ಮಾಡಿ

Rudresh-Murder

ಬೆಂಗಳೂರು, ಅ.17- ನಿನ್ನೆ ನಡೆದ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಕಾರ್ಪೊರೇಟರ್ ಒಬ್ಬರ ಕೈವಾಡವಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವಿಶೇಷ ತಂಡಗಳನ್ನು ರಚಿಸಿದ್ದು, ನಿನ್ನೆ  ಕಾರ್ಪೊರೇಟರ್‍ಅನ್ನು ಹುಡುಕಿಕೊಂಡು ಪೊಲೀಸರು ಇವರ ನಿವಾಸಕ್ಕೆ ಹೋಗಿದ್ದಾಗ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಇವರ ಮೊಬೈಲ್ ಕೂಡ ಸ್ವಿಚ್‍ಆಫ್ ಆಗಿದೆ. ಕಾರ್ಪೊರೇಟರ್‍ಗೂ, ರುದ್ರೇಶ್‍ಗೂ ವೈಮನಸ್ಸಿತ್ತು ಎಂದು ತಿಳಿದುಬಂದಿದ್ದು, ಘಟನೆಗೆ ಈ ಕಾರಣವೂ ಇರಬಹುದು ಎಂಬ ಹಿನ್ನೆಲೆಯಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಗಳ ಫುಟೇಜ್‍ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದಕ್ಕೆ ಸಿಸಿಬಿಯ ತಾಂತ್ರಿಕ ವಿಭಾಗದ ಪೊಲೀಸರು ನೆರವು ನೀಡುತ್ತಿದ್ದಾರೆ.

ಸ್ಥಳೀಯರಿಂದ ಮಾಹಿತಿ ಪಡೆದ ಸಿಸಿಬಿ ತಂಡ :

ನಿನ್ನೆ ಶಿವಾಜಿನಗರದಲ್ಲಿ ನಡೆದ ರುದ್ರೇಶ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೆÇಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಸ್ಥಳೀಯರಿಂದ ಹಲವು ಮಾಹಿತಿ ಪಡೆದಿದ್ದಾರೆ. ಕೊಲೆ ನಡೆಸಿ ಬೈಕ್‍ನಲ್ಲಿ ಪರಾರಿಯಾಗಿರುವ ಇಬ್ಬರು ಆರೋಪಿಗಳು ಯಾವ ಕಡೆ ಸಾಗಿದರು ಎಂಬ ಬಗ್ಗೆಯೂ, ಅವರ ಚಹರೆ ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಸಿಸಿಬಿ ಪೊಲೀಸರು ಪಡೆದುಕೊಂಡಿದ್ದಾರೆ. ಘಟನೆ ನಡೆದ ವ್ಯಾಪ್ತಿಯಲ್ಲಿದ್ದ ಸಿಸಿಟಿವಿಗಳನ್ನು ಈ ತನಿಖಾ ತಂಡ ಪರಿಶೀಲನೆ ನಡೆಸಿ ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿದೆ.

► Follow us on –  Facebook / Twitter  / Google+

Facebook Comments

Sri Raghav

Admin