ರೇಣುಕಾಚಾರ್ಯ ಬಂಧನಕ್ಕೆ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

renukachrya

ದಾವಣಗೆರೆ, ಆ.9-ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಬಂಧಿಸುವಂತೆ ಒತ್ತಾಯಿಸಿ ನಗರದಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮಹಾನಗರ ಪಾಲಿಕೆ ಮುಂಭಾಗ ಪಾಲಿಕೆಯ ಕಾಂಗ್ರೆಸ್ ಸದಸ್ಯರಾದ ದಿನೇಶ್ ಕೆ.ಶೆಟ್ಟಿ, ಎಂ.ಹಾಲೇಶ್, ಶಿವನಹಳ್ಳಿ ರಮೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ದಿನೇಶ್ ಕೆ.ಶೆಟ್ಟಿ, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ರೇಣುಕಾಚಾರ್ಯರ ಹೆಸರು ಕೇಳಿಬಂದಿದೆ. ಕೂಡಲೇ ಅವರನ್ನೂ ಕೂಡ ಬಂಧಿಸಿ ವಿಚಾರಣೆಗೊಳಪಡಿಸಬೇಕು. ಇಲ್ಲದಿದ್ದರೆ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು.

Facebook Comments

Sri Raghav

Admin