ರೈತರಿಗೂ ವೇತನ ಆಯೋಗ ರಚಿಸಿ : ಸಿಎಂಗೆ ಪುಟ್ಟಣ್ಣಯ್ಯ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ks-puttannayya

ಮೈಸೂರು, ಜ.25- ಸರ್ಕಾರಿ ನೌಕರರಿಗೆ ರಚಿಸಿರುವ ವೇತನ ಆಯೋಗವನ್ನು ರೈತರಿಗೂ ರಚಿಸಬೇಕೆಂದು ಶಾಸಕ ಪುಟ್ಟಣ್ಣಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.
ರಾಮಕೃಷ್ಣ ನಗರದಲ್ಲಿರುವ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಜೆಟ್‍ನಲ್ಲಿ ರಾಜ್ಯ ಸರ್ಕಾರ ರೈತರ ಪರ ಮಂಡಿಸಬೇಕು. 25 ಸಾವಿರ ಕೋಟಿ ಅನುದಾನವನ್ನು ರೈತರಿಗೆ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ ಎಂದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಕೂಡ ರೈತರ ಪರವಾದ ಯೋಜನೆಗಳನ್ನು ಜಾರಿ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರು ಬಂಡವಾಳಶಾಹಿ ಪರವಾಗಿದ್ದು, ಐಷಾರಾಮಿ ಉದ್ಯಮಿಗಳ ಮೇಲೆ ಈ ಬಾರಿ ಹೆಚ್ಚಿನ ತೆರಿಗೆ ವಿಧಿಸಬೇಕು. ಇದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮಸೀದಿಯಲ್ಲಿ ಚುನಾವಣೆ ನಡೆಸದಂತೆ ಒತ್ತಾಯ:

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಗರದ ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ಚುನಾವಣೆ ನಡೆಸದಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಒಂದು ವೇಳೆ ಮಸೀದಿಗಳಲ್ಲಿ ಚುನಾವಣೆ ನಡೆದರೆ ಧಾರ್ಮಿಕ ಪುಣ್ಯ ಕ್ಷೇತ್ರಗಳಲ್ಲಿ ತಮ್ಮ ಅಸ್ತಿತ್ವ ಕಳೆದುಕೊಂಡು ರಾಜಕೀಯ ಮನೋಭಾವ ಉಂಟಾಗುತ್ತದೆ. ಮಸೀದಿಗಳಲ್ಲಿ ಚುನಾವಣೆ ನಡೆಸುವ ಸಲುವಾಗಿ ಸಚಿವ ತನ್ವೀರ್ ಸೇಠ್ ಅವರ ಕೈವಾಡವಿದೆ. ಹಾಗಾಗಿ ತಾವು ಅವರಿಗೆ ಮನವೊಲಿಸಬೇಕು ಎಂದು ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin