ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ರಾಜ್ಯ ಸರ್ಕಾರ : ಸಚಿವ ರೇಣುಕಾಚಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

renukachar

ತುಮಕೂರು, ಸೆ.27- ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಆರೋಪಿಸಿದ್ದಾರೆ.ರೈತರ ಸಾಲ ಮನ್ನಾ, ಜಿಲ್ಲೆಯ ಎಲ್ಲಾ ಕೆರೆಗಳಿಗೆ ಹೇಮಾವತಿ ನೀರು ಹರಿಸುವುದು ಸ್ಭೆರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಮುತ್ತಿಗೆ ವೇಳೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ಧಾಗ ಇದೇ ರೀತಿಯ ಸಂಕಷ್ಟ ಉಂಟಾದಾಗ ಛತ್ತೀಸ್‍ಗಡದಿಂದ ವಿದ್ಯುತ್ ಖರೀದಿ ಮಾಡಿ ರೈತರ ಪಂಪ್‍ಸೆಟ್‍ಗಳಿಗೆ ಮೂರು ಪೇಸ್ ವಿದ್ಯುತ್ ನೀಡಲಾಗಿತ್ತು. ಆದರೆ ಈ ಸರಕಾರ ದಿನಕ್ಕೆ 2 ಗಂಟೆ ತ್ರಿಪೇಸ್ ವಿದ್ಯುತ್ ನೀಡಲು ವಿಫಲವಾಗಿದೆ.ಕೂಡಲೇ ರೈತರಿಗೆ ಬೆಳೆ ಪರಿಹಾರ ನೀಡಬೇಕು.ಕೇಂದ್ರದೊಂದಿಗೆ ಸಂಘರ್ಷ ನಡೆಸುವುದನ್ನು ಬಿಟ್ಟು ರೈತರಿಗೆ ನೆರವಿಗೆ ಬರಬೇಕೆಂದು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನಾನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರೈತಮೋಚಾ ರಾಜ್ಯ ಉಪಾಧ್ಯಕ್ಷ ಎಸ್.ಶಿವಪ್ರಸಾದ್, ಜಿಲ್ಲೆಯಾದ್ಯಂತ ಬರಗಾಲ ಆವರಿಸಿದೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ಜಿಲ್ಲೆಗೆ ಸಂಕಷ್ಟ ಸಮಯದಲ್ಲಿ ನಿಗಧಿಯಾಗಿದ್ದ ನೀರು ಹರಿಸುವಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಮಂತ್ರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಶಾಸಕ ಬಿ.ಸುರೇಶ್‍ಗೌಡ ಮಾತನಾಡಿ, ಜಿಲ್ಲಾಧಿಕಾರಿಗಳು ರೈತರ ಹೊಲಗದ್ದೆಗಳಿಗೆ ಭೇಟಿ ನೀಡಿ ನಷ್ಟ ಪರಿಹಾರದ ಅಂದಾಜು ಮಾಡಬೇಕು. ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆಹಾಕಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಜೋತಿಗಣೇಶ್ , ಮಾಜಿ ಶಾಸಕ ಹೆಚ್.ಎಸ್.ಕಿರಣಕುಮಾರ್, ಮುಖಂಡರಾದ ಬಿ.ಕೆ.ಮಂಜುನಾಥ್, ಆ.ನ.ಲಿಂಗಪ್ಪ, ಜಿ.ಎನ್. ಬೆಟ್ಟಸ್ವಾಮಿ, ಜಿ.ಪಂ.ಸದಸ್ಯ ವೈ.ಹೆಚ್.ಹುಚ್ಚಯ್ಯ, ಲಕ್ಷ್ಮೀಶ್, ಹಾಲೇನೂರು ಲೇಪಾಕ್ಷ, ಸರೋಜಗೌಡ, ಜಿ.ಪಂ.ಉಪಾಧ್ಯಕ್ಷ ಶಾರದ ನರಸಿಂಹಮೂರ್ತಿ, ಸದಸ್ಯ ಗೂಳೂರು ಶಿವಕುಮಾರ್, ಡಿ.ಆರ್.ಬಸವರಾಜು, ಹನುಮಂತರಾಯಪ್ಪ, ಡಿ.ಕೃಷ್ಣಕುಮಾರ್, ಚಂದ್ರಶೇಖರ್ ಮತ್ತಿತರರು ಭಾಗವಹಿಸಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin