ರೈತರ ಅಭಿವೃದ್ಧಿಗೆ ಹಾಲು ಒಕ್ಕೂಟ ಶ್ರಮಿಸುತ್ತಿದೆ

ಈ ಸುದ್ದಿಯನ್ನು ಶೇರ್ ಮಾಡಿ

kaduru

 

ಕಡೂರು, ಆ.23- ಯಾವುದೇ ರೀತಿಯ ರಾಜಕೀಯ ಬೆರೆಸದೆ ರೈತರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹಾಸನ ಹಾಲು ಒಕ್ಕೂಟ ಸೇವೆ ಸಲ್ಲಿಸುತ್ತಿದೆ ಎಂದು ಒಕ್ಕೂಟದ ನಿರ್ದೇಶಕ ಎಸ್.ಎಲ್. ಧರ್ಮೇಗೌಡ ಹೇಳಿದರು.ಪಟ್ಟಣದ ಪಿಕಾರ್ಡ್ ಬ್ಯಾಂಕ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ವiಹಾ ಮಂಡಲ, ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಕಾರ್ಯ ದಕ್ಷತೆ, ಆಡಳಿತ ನಿರ್ವಹಣೆ, ಕಾಯ್ದೆ ತಿದ್ದುಪಡಿ, ಹೈನುಗಾರಿಕೆ ಹಾಗೂ ಯಶಸ್ವಿನಿ ನೋಂದಣಿ ಪ್ರಗತಿ ಕುರಿತಾದ ವಿಶೇಷ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 1365 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, 25 ಸಾವಿರ ಸದಸ್ಯರನ್ನು ಹೊಂದಲಾಗಿದೆ. ಇವುಗಳಿಂದ ಪ್ರತಿದಿನಕ್ಕೆ 94 ಸಾವಿರ, ತಿಂಗಳಿಗೆ 21,54,000 ಲೀಟರ್ ಹಾಲು ಸಂಗ್ರಹವಾಗುತ್ತಿದೆ. ತಿಂಗಳಿಗೆ 6 ಕೋಟಿ 25 ಲಕ್ಷ ರೂ.ಗಳನ್ನು ಹೈನುಗಾರಿಕೆಗೆ ಹಾಸನ ಹಾಲು ಒಕ್ಕೂಟದಿಂದ ನೀಡಲಾಗುತ್ತಿದೆ ಎಂದು ವಿವರಿಸಿದರು. ಸಹಕಾರ ಸಂಘಗಳ ಉಪನಿಬಂಧಕ ಆರ್.ಜೆ.ಕಾಂತರಾಜು, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ. ಗೋಪಾಲ್, ಹಾಸನ ಹಾಲು ಒಕ್ಕೂಟದ ನಿರ್ದೇಶಕ ಟಿ.ಕೆ.ಜಗದೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಜಿ.ರಾಮಪ್ಪ, ಉಪಾಧ್ಯಕ್ಷ ಪಿ.ರವಿ, ಡಾ. ಸುರೇಂದ್ರನಾಥ್ ಮಾತನಾಡಿದರು.

 

► Follow us on –  Facebook / Twitter  / Google+

Facebook Comments

Sri Raghav

Admin