ರೈತರ ಆತ್ಮಹತ್ಯೆ : ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೊಟೀಸ್

ಈ ಸುದ್ದಿಯನ್ನು ಶೇರ್ ಮಾಡಿ

Former-Suicide-e01
ನವದೆಹಲಿ, ಜ.27- ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ಸುಪ್ರೀಂಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಆರ್‍ಬಿಐ ಮತ್ತು ಕೇಂದ್ರಕ್ಕೆ ನೋಟಿಸ್‍ಗಳನ್ನು ಜಾರಿಗೊಳಿಸಿದೆ.   ಈ ದುರಂತಗಳಿಗೆ ಕಾರಣಗಳನ್ನು ಪರಿಶೀಲಿಸಿ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆಯೂ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಮತ್ತು ನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನೊಳಗೊಂಡ ನ್ಯಾಯಪೀಠ ಇಂದು ಈ ಸಂಬಂಧ ಕೇಂದ್ರ, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳಿಗೆ ತರಾಟೆ ತೆಗೆದುಕೊಂಡಿದೆ.  ಇದೊಂದು ಗಂಭೀರ ಮತ್ತು ಸೂಕ್ಷ್ಮ ವಿಚಾರ. ದೇಶದ ಬೆನ್ನೆಲುಬಾಗಿರುವ ರೈತರ ಆತ್ಮಹತ್ಯೆ ಪ್ರಕರಣಗಳು ಆತಂಕದ ವಿಷಯ. ಕೃಷಿಕರು ಸಾವಿಗೆ ಶರಣಾಗುತ್ತಿರುವುದಕ್ಕೆ ಮುಖ್ಯವಾಗಿ ಏನು ಕಾರಣ ಎಂದು ಪೀಠ ಪ್ರಶ್ನಿಸಿದೆ.   ರೈತರ ಆತ್ಮಹತ್ಯೆ ಪ್ರಕರಣಗಳ ಹಿಂದೆ ಇರುವ ವಾಸ್ತವ ಕಾರಣಗಳನ್ನು ಪರಿಶೀಲಿಸುವ ಅಗತ್ಯವಿದೆ.

ಈ ಬಗ್ಗೆ ಕೂಲಂಕಶ ಪರಿಶೀಲನೆ ನಡೆಸಿ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯವು ಕೇಂದ್ರ, ರಾಜ್ಯ ಮತ್ತು ಯುಟಿ ಸರ್ಕಾರಗಳು ಮತ್ತು ಆರ್‍ಬಿಐಗೆ ಸೂಚಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ರೈತರ ಆತ್ಮಹತ್ಯೆ ಮತ್ತು ಕೃಷಿಕರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಎನ್‍ಜಿಒ ಸಂಸ್ಥೆಯೊಂದು ಸಲ್ಲಿಸಿದ ಮನವಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಸೂಚನೆ ನೀಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin