ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಪುಂಡಾನೆ ಕೊನೆಗೂ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

elephant-attack

ಮಡಿಕೇರಿ,ನ.13-ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಪುಂಡಾನೆಯನ್ನು ಅರಣ್ಯ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕೆಲವು ದಿನಗಳಿಂದ ಮಡಿಕೇರಿ ಸುತ್ತಮುತ್ತಲ ಗ್ರಾಮಗಳ ಜಮೀನುಗಳಿಗೆ ನುಗ್ಗಿ ಬೆಳೆದು ನಿಂತಿದ್ದ ಬೆಳೆಗಳನ್ನು ಈ ಪುಂಡಾನೆ ತುಳಿದು ನಾಶಪಡಿಸಿ ದಾಂಧಲೆ ನಡೆಸಿತ್ತು. ಇದರಿಂದ ಗ್ರಾಮಸ್ಥರೂ ಕೂಡ ಆತಂಕದಲ್ಲೇ ಕಾಲ ಕಳೆಯುವಂತಾಗಿತ್ತು. ಪುಂಡಾನೆಯಿಂದ ತಮಗಾಗುತ್ತಿರುವ ಬೆಳೆ ನಷ್ಟದ ಬಗ್ಗೆ ರೈತರು ಅರಣ್ಯ ಇಲಾಖೆಗೆ ದೂರು ನೀಡಿದ್ದು. ಎಚ್ಚೆತ್ತುಕೊಂಡು ಅರಣ್ಯ ಇಲಾಖೆಯ 150 ಸಿಬ್ಬಂದಿಗಳು 7 ಸಾಕಾನೆಗಳ ನೆರವಿನಿಂದ ಕಾರ್ಯಾಚರಣೆ ನಡೆಸಿ ಕೊನೆಗೂ ಪುಂಡಾನೆಯನ್ನು ಹಿಡಿದು ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

 

► Follow us on –  Facebook / Twitter  / Google+

 

Facebook Comments

Sri Raghav

Admin