ರೈತರ ನೆರವಿಗೆ ಧಾವಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸಿದ್ದು ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

CM-Busy
ಬೆಂಗಳೂರು,ಅ.18- ತೋಟಗಾರಿಕೆ, ಕೃಷಿ ಮಾರುಕಟ್ಟೆ , ಪಶುಸಂಗೋಪನೆ, ರೇಷ್ಮೆ ಮತ್ತು ಸಹಕಾರ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆಯಿತು. ಸಭೆಯಲ್ಲಿ ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಎ.ಮಂಜು, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸೇರಿದಂತೆ ಇಲಾಖೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು. ಮೊದಲಿಗೆ ತೋಟಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಪ್ರಸ್ತಾಪಿಸಿದಂತೆ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ರೈತರಿಗೆ ತಲುಪುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು.

ರೈತರಿಗೆ ಸರ್ಕಾರದಿಂದ ನೀಡಲಾಗಿರುವ ವಿವಿಧ ಸೌಲಭ್ಯಗಳು ಮತ್ತು ಸವಲತ್ತುಗಳು ಕಾಲಕಾಲಕ್ಕೆ ರೈತರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. ರೈತರಿಗಾಗಿ ರೂಪಿಸಿರುವ ಯೋಜನೆಗಳು ಅವರಿಗೆ ಪ್ರಾಮಾಣಿಕವಾಗಿ ತಲುಪಬೇಕು, ಅಧಿಕಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

► Follow us on –  Facebook / Twitter  / Google+

Facebook Comments

Sri Raghav

Admin