ರೈತರ ಸಾಲದ ಮಾಹಿತಿ ನೀಡಲು ಸಹಕಾರ ಸಂಘಗಳಿಗೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Former-dvdggv

ಬೆಂಗಳೂರು,ಜೂ.23-ರೈತರ ಸಾಲಮನ್ನಾ ಹಿನ್ನೆಲೆಯಲ್ಲಿ ಸಹಕಾರಿ ಸಂಘ ಹಾಗೂ ಬ್ಯಾಂಕ್‍ಗಳು ತಮ್ಮಿಂದ ರೈತರು ಪಡೆದ ಸಾಲದ ಮಾಹಿತಿಯನ್ನು ಇದೇ 27ರೊಳಗೆ ನೀಡುವಂತೆ ಸೂಚನೆ ನೀಡಲಾಗಿದೆ. ಇತ್ತೀಚೆಗೆ ವಿಧಾನಸಭೆಯಲ್ಲಿ ಅನುದಾನ ಬೇಡಿಕೆಗಳ ಬಗ್ಗೆ ನಡೆದ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಸಹಕಾರ ಸಂಘದ ಮೂಲಕ ಅಲ್ಪಾವಧಿ ಬೆಳೆ ಸಾಲ ಪಡೆದು ಜೂ.20ಕ್ಕೆ ಹೊರ ಬಾಕಿ ಹೊಂದಿರುವ 2,22,750 ರೈತರ ರೂ. 50000 ಸಾಲ ಮನ್ನಾ ಮಾಡುವುದಾಗಿ ಪ್ರಕಟಿಸಿದ್ದರು.   ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲು ಸಹಕಾರ ಸಂಘಗಳು ಮತ್ತು ಬ್ಯಾಂಕ್‍ಗಳು ಇದೇ 27ರೊಳಗೆ ಸರ್ಕಾರಕ್ಕೆ ಮಾಹಿತಿ ನೀಡಲು ಸೂಚಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin