ರೈತರ ಸಾಲಮನ್ನಾ ಮಾಡಲು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

Session-Updats--01

ಬೆಂಗಳೂರು,ಜೂ.12-ರೈತರ ಸಾಲ ಮನ್ನಾ ಮಾಡುವಂತೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ಶಾಸಕ ಕೋನರೆಡ್ಡಿ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು. ಇಂದು ಬೆಳಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ಜಗದೀಶ್ ಶೆಟ್ಟರ್, ನಿಮ್ಮ ಪಕ್ಷದ ಯುವರಾಜರು ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ಅವರೇ ಮಧ್ಯಪ್ರದೇಶದಲ್ಲಿ ಸಾಲಮನ್ನಾ ಮಾಡುವಂತೆ ಹೋರಾಟ ಮಾಡಿದ್ದಾರೆ. ಈಗಾಗಲೇ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ಸಾಲಮನ್ನಾ ಘೋಷಣೆಯಾಗಿದೆ ಎಂದರು.

ರೈತರು ಬಹುದಿನಗಳಿಂದ ಸಾಲಮನ್ನಾ ಮಾಡಲು ಬೇಡಿಕೆ ಇಟ್ಟಿದ್ದಾರೆ. ಈಗಲಾದರೂ ಮುಖ್ಯಮಂತ್ರಿ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ದನಿಗೂಡಿಸಿದ ಶಾಸಕ ಎನ್.ಎಚ್.ಕೋನರೆಡ್ಡಿ , ರೈತರ ಸಾಲಮನ್ನಾ ಮಾಡಬೇಕು, ಮಹದಾಯಿ ವಿವಾದದಲ್ಲಿ ಪ್ರಧಾನಿಯವರು ಮಧ್ಯಪ್ರವೇಶಿಸಬೇಕೆಂಬುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಇಂದು ಬಂದ್‍ಗೆ ಕರೆ ಕೊಟ್ಟಿವೆ. ಆದರೆ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಆಗುತ್ತಿದೆ. ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು.
ಮಧ್ಯಪ್ರವೇಶಿಸಿದ ಸ್ಪೀಕರ್ ಕೋಳಿವಾಡ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಲು ಅವಕಾಶ ನೀಡುವ ಭರವಸೆ ನೀಡಿ ಈ ವಿಷಯದ ಚರ್ಚೆಗೆ ತೆರೆ ಎಳೆದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin