ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಆ.9ರಂದು ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Formers
ಬೆಂಗಳೂರು, ಮಾ.7-ದೇಶಾದ್ಯಂತ ಕೃಷಿ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಕಿಸಾನ್ ಮಹಾ ಸಂಘದ ವತಿಯಿಂದ ಆ.9 ರಂದು ದೇಶವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.  ರೈತರ ಎಲ್ಲಾ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು, ಕೃಷಿ ಉತ್ಪನ್ನಗಳಿಗೆ ಡಾ.ಸ್ವಾಮಿನಾಥನ್ ವರದಿಯಂತೆ ಬೆಲೆ ನಿಗದಿಯಾಗಬೇಕು ಎಂದು ಒತ್ತಾಯಿಸಿ ಕೇಂದ್ರದ ಗಮನ ಸೆಳೆಯಲು ಎಲ್ಲ ರೈತ ಸಂಘಟನೆಗಳು ತೀರ್ಮಾನಿಸಿವೆ.  ಕಳೆದ ಎರಡು ದಿನಗಳಿಂದ ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ದೇಶದ ವಿವಿಧ ರೈತ ಸಂಘಟನೆಗಳು ನಡೆಸಿದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು ಎಂದು ಕರ್ನಾಟಕ ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.   ಕೃಷಿ ವಲಯ ಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳು ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin