ರೈತ ಆತ್ಮ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

farmers-suicide

ಬೆಳಗಾವಿ,ಆ26- ಬೆಳೆ ನಷ್ಟ ಹಾಗೂ ಸಾಲದ ಬಾಧೆಯಿಂದ ರೈತನೊಬ್ಬ ಇಂದು ಬೆಳಿಗ್ಗೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ.  ವಿಠ್ಠಲ್ ಸಿದ್ದಪ್ಪ ಹಳಾಜೆ(28) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರಿಗೆ 2ಎಕರೆ ಜಮೀನಿದ್ದು, ಬೆಳೆ ಬೆಳೆಯಲೆಂದು ಸಿಂಡಿಕೇಟ್ ಬ್ಯಾಂಕ್‍ನಲ್ಲಿ 1 .20ಲಕ್ಷರೂ, ಚಿಕ್ಕೋಡಿಯ ಮಹೀಂದ್ರ ಫೈನಾನ್ಸ್ ನಲ್ಲಿ 6ಲಕ್ಷರೂ, ಕೈಗಡ ಸಾಲವನ್ನು 4ರಿಂದ 5ಲಕ್ಷದವರೆಗೆ ಸಾಲ ಮಾಡಿದ್ದರು ಎನ್ನಲಾಗಿದೆ. ಮಳೆ ಕೈಕೊಟ್ಟ ಹಿನ್ನಲೆಯಲ್ಲಿ ಬೆಳೆ ನಷ್ಟವಾಗಿ ಸಾಲ ತೀರಿಸಲಾಗದೆ ಮನನೊಂದು ಇಂದು ಬೆಳಗಿನ ಜಾವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಸ್ಥಳಕ್ಕೆ ಭೇಟಿ ನೀಡಿದ ಪೆÇಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

 

► Follow us on –  Facebook / Twitter  / Google+

Facebook Comments

Sri Raghav

Admin