ರೈಲಿಗೆ ತಲೆಕೊಟ್ಟು ಪೊಲೀಸ್ ಕಾನ್‍ಸ್ಟೆಬಲ್ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Train-Suicide

ದಾವಣಗೆರೆ, ಆ.3- ಕಾನ್‍ಸ್ಟೆಬಲ್‍ರೊಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾರುತಿ ಬರ್ಕಿ (26) ಆತ್ಮಹತ್ಯೆ ಮಾಡಿಕೊಂಡ ಕಾನ್‍ಸ್ಟೆಬಲ್. ಮೂಲತಃ ಹಾವೇರಿಯ ಮೆಡ್ಲೇರಿ ಗ್ರಾಮದವರಾಗಿದ್ದು, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕರ್ತವ್ಯ ನಿಮಿತ್ತ ದಾವಣಗೆರೆಗೆ ಆಗಮಿಸಿದ್ದರು ಎನ್ನಲಾಗಿದೆ. ನಿನ್ನೆ ಸಂಜೆ ಮೂಕನೂರು ಕ್ರಾಸ್ ಬಳಿ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ಏನೆಂಬುದು ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin