ರೈಲು ಮಾರ್ಗಗಳ ವಿದ್ಯುದ್ದೀಕರಣಕ್ಕೆ ಒತ್ತು : ಸುರೇಶ್ ಪ್ರಭು

ಈ ಸುದ್ದಿಯನ್ನು ಶೇರ್ ಮಾಡಿ

Suresh-PRabhu

ಬೆಂಗಳೂರು, ಮಾ.26– ದೇಶದಲ್ಲಿ ಶೇ.70ರಷ್ಟು ರೈಲ್ವೆ ಮಾರ್ಗಗಳು ಅವಳಿ ಮಾರ್ಗಗಳಾಗಿದ್ದು, ಇನ್ನು ಮುಂದೆ ರೈಲ್ವೆ ಮಾರ್ಗಗಳ ಡಬ್ಲಿಂಗ್ ಮತ್ತು ವಿದ್ಯುದ್ದೀಕರಣಕ್ಕೆ ಒತ್ತು ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ತಿಳಿಸಿದರು.  ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಹಾಸನ-ಬೆಂಗಳೂರು ನಡುವಿನ ಹೊಸ ರೈಲು ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನು ಮುಂದೆ ರೈಲ್ವೆ ಮಾರ್ಗಗಳ ಡಬ್ಲಿಂಗ್, ತ್ರಿಬ್ಲಿಂಗ್ ಕಾರ್ಯಗಳಿಗೆ ಹೆಚ್ಚು ಒತ್ತು ಕೊಡಲಾಗುವುದು. ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಡಬ್ಲಿಂಗ್ ಕಾರ್ಯ ಮುಗಿಯಲಿದೆ. ದೇಶದಲ್ಲಿ ಮುಂದಿನ ಐದು ವರ್ಷಗಳಲ್ಲಿ ಡಬ್ಲಿಂಗ್ ಕಾರ್ಯ ಪೂರ್ಣಗೊಳಿಸಲಿದ್ದೇವೆ ಎಂದು ಹೇಳಿದರು.

ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಮೂಲ ಸೌಕರ್ಯಕ್ಕೆ ಒತ್ತು ನೀಡುತ್ತಿದ್ದೇವೆ. ಇದೇ ರೀತಿ ದೇಶದ ಎಲ್ಲ ಭಾಗಗಳಿಗೂ ಆದ್ಯತೆ ನೀಡಲಾಗುವುದು. ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆ ಜತೆಗೆ ಯಶವಂತಪುರ, ಕೃಷ್ಣರಾಜಪುರ, ಯಲಹಂಕ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು.
ಮಾನವ ರಹಿತ 64 ಲೆವೆಲ್ ಕ್ರಾಸಿಂಗ್‍ಗಳನ್ನು ನಿರ್ಮಿಸಿ ಎಲ್ಲ ರೈಲ್ವೆ ನಿಲ್ದಾಣಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಕೆಲವೇ ತಿಂಗಳಲ್ಲಿ ಬೆಂಗಳೂರಿನ ಸಬ್-ಅರ್ಬನ್ ರೈಲು ಯೋಜನೆಗೂ ಚಾಲನೆ ಸಿಗಲಿದೆ ಎಂದ ಅವರು, ರೈಲು ಯೋಜನೆಗಳಿಗೆ ಶೇ.50ರಷ್ಟು ಪಾಲು ಭರಿಸುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin