ರೈಲ್ವೆ ಹಳಿ ಮೇಲೆ ತಾಯಿ, ಮಗನ ಶವ ಪತ್ತೆ,  ಕೊಲೆ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಮೇ 22- ತಾಯಿ ಹಾಗೂ ಮಗನನ್ನು ಭೀಕರವಾಗಿ ಹತ್ಯೆಗೈದು ಶವವನ್ನು ರೈಲ್ವೆ ಹಳಿ ಮೇಲೆ ಬಿಸಾಡಿರುವ ಅಮಾ ನವೀಯ ಘಟನೆ ಬೆಳಗಾವಿಯ ನ್ಯೂ ಗಾಂಧಿನಗರ ಬಳಿ ನಡೆದಿದೆ. ನ್ಯೂ ಗಾಂಧಿನಗರ ಬಳಿಯ ರೈಲ್ವೇ ಟ್ರ್ಯಾಕ್‍ನಲ್ಲಿ ಇಂದು ಬೆಳಗ್ಗೆ ಎರಡು ಶವಗಳು ಪತ್ತೆಯಾಗಿವೆ.

ರೇಣುಕಾ(35) ಹಾಗೂ ಲಕ್ಷಣ(8) ಮೃತ ದುರ್ದೈವಿ ಗಳಾಗಿದ್ದಾರೆ. ಈ ಪ್ರಕರಣದಿಂದ ಕುಂದಾನಗರಿ ಬೆಚ್ಚಿ ಬಿದ್ದಿದೆ. ಬೆಳ್ಳಂಬೆಳಗ್ಗೆ ರೈಲ್ವೆ ನಿಲ್ದಾಣದಕ್ಕೆ ಬಂದ ಪ್ರಯಾಣಿಕರು ಸೇರಿದಂತೆ ನಗರ ನಿವಾಸಿಗಳು ರೈಲ್ವೆ ಹಳಿ ಮೇಲೆ ಬಿದ್ದ ಶವಗಳನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ.

ಮೃತ ದುರ್ದೈವಿಗಳು ಮೂಲತಃ ಹುಕ್ಕೇರಿ ತಾಲೂಕಿನ ಬೀರನೋಳಿ ಗ್ರಾಮದ ನಿವಾಸಿಯಾಗಿರುವ ರೇಣುಕಾ ಕುಟುಂಬ ಕಳೆದ ಹತ್ತು ವರ್ಷಗಳಿಂದ ಬೆಳಗಾವಿಯ ಮಾರುತಿನಗರದಲ್ಲಿ ವಾಸಿಸುತ್ತ ತರಕಾರಿ ಮಾರಿಕೊಂಡು ಮಹಿಳೆ ಜೀವನ ನಡೆಸುತ್ತಿದ್ದರು. ಪ್ರಕರಣಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಮೃತ ಕುಟುಂಬಸ್ಥರಿಂದ ಪತಿ ಯಲ್ಲಪ್ಪ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿಲಾಗುತ್ತಿದೆ.

ಮೊಟ್ಟ ಮೊದಲು ಆತ್ಮಹತ್ಯೆ ಎಂದು ತಿಳಿಯಲಾಗಿತ್ತು. ಇದೀಗ ಮೃತ ರೇಣುಕಾ ಕುಟುಂಬಸ್ಥರು ಗಂಡ ಯಲ್ಲಪ್ಪ ಕರಗುಪ್ಪಿ ಪತ್ನಿ ಹಾಗೂ ಮಗ ಇಬ್ಬರನ್ನೂ ಕೊಲೆ ಮಾಡಿ ನಂತರ ಹಳಿಯ ಮೇಲೆ ಶವ ಬಿಸಾಡಿದ್ದಾನೆಂದು ಆರೋಪಿಸಲಾಗುತ್ತಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ