ರೋಗಿಗಳ ಸೇವೆಯಿಂದ ಜೀವನ ಸಾರ್ಥಕ:ಶಾಸಕಿ ವೈ.ರಾಮಕ್ಕ

ಈ ಸುದ್ದಿಯನ್ನು ಶೇರ್ ಮಾಡಿ

 

ramakka-kgf

ಕೆಜಿಎಫ್, ಆ.24-ರೋಗಿಗಳ ಸೇವೆ ಮಾಡುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಶಾಸಕಿ ವೈ.ರಾಮಕ್ಕ ಹೇಳಿದರು.
ರಾಬರ್ಟ್‌ಸನ್‌ಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಉಚಿತ ವೈದ್ಯಕೀಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೋಗಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡು ಆಸ್ಪತ್ರೆಗೆ ಬರುತ್ತಾರೆ. ಅವರಿಗೆ ಖುಷಿಯಾಗುವ ರೀತಿಯಲ್ಲಿ ಚಿಕಿತ್ಸೆ ಕೊಡಬೇಕು. ಚಿಕಿತ್ಸೆ ಪಡೆದವರು ವಾಸಿಯಾದರೆ ಅವರ ಆರೈಕೆ ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ಸದಾ ಇರುತ್ತದೆ ಎಂದರು.  ಮಾಜಿ ಶಾಸಕ ವೈ.ಸಂಪಂಗಿ, ಜಿಲ್ಲಾ ಪಂಚಾಯತ್ ಸದಸ್ಯೆ ಅಶ್ವಿನಿ, ಡಾ.ರಜಿಯಾ ಸುಲ್ತಾನಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಫಯಾಜ್‌ಖಾನ್, ತಾ. ಪಂ.ಅಧ್ಯಕ್ಷೆ ಭಾಗ್ಯಮ್ಮ, ಡಾ.ಕಮಲಾಕರ್, ಆದರ್ಶಕುಮಾರ್ ಮತ್ತಿತರರು ಇದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin