ರೋಹಿಣಿ ವರ್ಗಾವಣೆಗೆ ಸಿಎಟಿ ತಡೆ, ಸರ್ಕಾರಕ್ಕೆ ಮುಖಭಂಗ

ಈ ಸುದ್ದಿಯನ್ನು ಶೇರ್ ಮಾಡಿ

Rohini--02
ಹಾಸನ. ಮಾ.08 : ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗವಣೆಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕ ತಡೆ ನೀಡಿದೆ. ನಿಯಮ ಬಾಹಿರವಾಗಿ ಅವಧಿಗೆ ಮುನ್ನವೇ ವರ್ಗಾವಣೆ ಮಾಡುವ ಸರ್ಕಾರದ ನಿರ್ಧಾರವನ್ನು ರೋಹಿಣಿ ಅವರು ಸಿಎಟಿ ನಲ್ಲಿ ಪ್ರಶ್ನಿಸಿದ್ದರು. ಜಿಲ್ಲಾಧಿಕಾರಿಗಳ ಮನವಿಯನ್ನು ವಿಚಾರಣೆ ನಡೆಸಿದ ಸಿಎಟಿ ವರ್ಗಾವಣೆ ಆದೇಶಕ್ಕೆ ಮಾರ್ಚ್ 13ರವರೆಗೆ ತಡೆ ನೀಡಿದೆ. ಇದೇ ವೇಳೆ ಸರ್ಕಾರ, ವರ್ಗಾವಣೆ ಸಂಬಂಧ ಮಾ.12ರ ಒಳಗೆ ಪ್ರತಿಕ್ರಿಯೆ ನೀಡುವುದಾಗಿ ಸಿಎಟಿ ಗೆ ಹೇಳಿದೆ. ಸಿಎಟಿ ಈ ಆದೇಶದಿಂದ ರೋಹಿಣಿ ಸಿಂಧೂರಿ ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಖಭಂಗ ಉಂಟಾಗಿದೆ.

ರೋಹಿಣಿ ಅವರ ವರ್ಗಾವಣೆ ಸಂಬಂಧ ಆದೇಶವನ್ನು ಮಂಗಳವಾರದಂದು ಹಿಂಪಡೆದಿದ್ದ ನ್ಯಾಯಾಲಯ ಮತ್ತೆ ಬುಧವಾರದಂದು ಒಟ್ಟು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಹೊರಡಿಸಿದ್ದ ಆದೇಶದಲ್ಲಿ ಇವರ ಹೆಸರನ್ನೂ ಸೇರಿಸಿತ್ತು. ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿತ್ತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin