ರೋಹಿಣಿ ಸಿಂಧೂರಿ ಸೇರಿ 7 ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಬ್ರೇಕ್

ಈ ಸುದ್ದಿಯನ್ನು ಶೇರ್ ಮಾಡಿ

Rohini--01
ಬೆಂಗಳೂರು. ಜ.23: ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗ ತಡೆ ನೀಡಿದೆ. ರೋಹಿಣಿ ಸಿಂಧೂರಿ ಸೇರಿ 7 ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ದಿನಾಂಕದವರೆಗೂ ವರ್ಗಾವಣೆ ಮಾಡದಂತೆ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲೇ ನಡೆಯುವುದರಿಂದ ಮತದಾರರ ಪಟ್ಟಿ ಸೇರ್ಪಡೆಯ ಅಂತಿಮ ದಿನದವರೆಗೆ ಡಿಸಿಗಳನ್ನ ವರ್ಗಾವಣೆ ಮಾಡದಂತೆ ಚುನಾವಣಾ ಆಯೋಗ ಈ ಮೊದಲೇ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಆದರೂ, ರೋಹಿಣಿ ಸಿಂಧೂರಿ ಸೇರಿ 7 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು. ಈ ಮಧ್ಯೆ, ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಬೇಕಾದ ಬಲವಾದ ಕಾರಣವಿದ್ದರೆ ಮೊದಲೇ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕು ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಕಾರ್ಯಕರ್ತರಿಂದ ಅಸಮಾಧಾನದ ಹಿನ್ನೆಲೆಯಲ್ಲಿ ನಿನ್ನಯಷ್ಟೆ ಹಾಸನ ಡಿಸಿ ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಶ್ರವಣಬೆಳಗೊಳದಲ್ಲಿ ಮಹಾ ಮಸ್ತಕಾಭಿಷೇಕಕಕ್ಕೆ ಕೆಲವು ದಿನಗಳು ಬಾಕಿ ಇರುವಾಗ ಡಿಸಿ ವರ್ಗಾವಣೆ ಟೀಕೆಗೂ ಕಾರಣವಾಗಿತ್ತು. ಮಹಾ ಮಸ್ತಕಾಭಿಷೇಕಕ್ಕೆ ಬಿಡುಗಡೆಯಾದ ಹಣ ದುರುಪಯೋಗವಾಗದಂತೆ ರೋಹಿಣಿ ಸಿಂಧೂರಿ ತಡೆದಿದ್ದರು. ಆದ್ದರಿಂದಲೇ ಪ್ರಭಾವಿಗಳು ತಮ್ಮ  ಪ್ರಭಾವ ಬಳಸಿ ವರ್ಗಾವಣೆ ಮಾಡಿಸಿದ್ದಾರೆಂಬ ಆರೋಪವೂ ಕೇಳಿಬಂದಿತ್ತು.

ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನೀತಿ ಸಂಹಿತೆಯೇ ಜಾರಿಯಾಗಿಲ್ಲ. ಆದರೂ, ಚುನಾವಣಾ ಆಯೋಗೆ ಅದು ಹೇಗೆ ವರ್ಗಾವಣೆಗೆ ತಡೆ ನೀಡುತ್ತದೆ ಎಂದು ಪ್ರಶ್ನಿಸಿದ್ದಾರೆ. ರೋಹಿಣಿ ಸಿಂಧೂರಿಯನ್ನ ಆಢಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಮಾಡಲಾಗಿದೆ. ಎಲ್ಲರಿಗೂ ಕಾರಣ ಹೇಳಲು ಆಗುವುದಿಲ್ಲ ಎಂದಿದ್ದಾರೆ.

Facebook Comments

Sri Raghav

Admin