ರ್ಯಾಲಿಯಲ್ಲಿಲ್ಲ, ಸಂಸತ್‍ನಲ್ಲಿ ಮೋದಿ ಹೇಳಿಕೆ ನೀಡಬೇಕು : ಕಾಂಗ್ರೆಸ್ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

Modi

ನವದೆಹಲಿ, ಆ.10-ಕಾಶ್ಮೀರ ಹಿಂಸಾಚಾರ ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾಂಗ್ರೆಸ್ ಸದಸ್ಯರು ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.  ಮೇಲ್ಮನೆ ಕಲಾಪ ಆರಂಭವಾಗುತ್ತಿದ್ದಂತೆ, ಕಾಶ್ಮೀರ ಕುರಿತ ಚರ್ಚೆಯಲ್ಲಿ ಪ್ರಧಾನಿ ಮೋದಿ ಗೈರು ಹಾಜರಾಗಿರುವ ಬಗ್ಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ವಿಷಯ ಪ್ರಸ್ತಾಪಿಸಿ, ಸಂಸತ್ತಿನ ಚರ್ಚೆಯಲ್ಲಿ ಭಾಗವಹಿಸುವ ಬದಲು ಮೋದಿ ಅವರು ಮಧ್ಯಪ್ರದೇಶದ ರ್ಯಾಲಿಯಲ್ಲಿ ಕಾಶ್ಮೀರ ವಿಷಯದ ಬಗ್ಗೆ ಮಾತನಾಡುತ್ತಾರೆ ಎಂದು ಟೀಕಿಸಿದರು.  ಮಧ್ಯಪ್ರದೇಶಕ್ಕೆ ಪಾರ್ಲಿಮೆಂಟ್ ಸ್ಥಳಾಂತರಗೊಂಡಿದೆಯೇ ಎಂದು ಪ್ರಶ್ನಿಸಿದ ಅವರು, ಪ್ರಧಾನಿಯವರ ಹೇಳಿಕೆ ಸಂಸತ್ತಿನಿಂದ ಬರಬೇಕೇ ಹೊರತು ಮಧ್ಯಪ್ರದೇಶದಿಂದ ಅಲ್ಲ ಎಂದು ವ್ಯಂಗ್ಯವಾಡಿದರು.

Facebook Comments

Sri Raghav

Admin