ಲಂಚಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ

ಈ ಸುದ್ದಿಯನ್ನು ಶೇರ್ ಮಾಡಿ

turvekere

ತುರುವೇಕೆರೆ, ಅ.21- ಭ್ರಷ್ಟಾಚಾರದಿಂದ ತುಂಬಿ ತುಳುಕುತ್ತಿರುವ ಕರ್ನಾಟಕವನ್ನು ಲಂಚಮುಕ್ತ ರಾಜ್ಯವನ್ನಾಗಿಸುವ ಸಂಕಲ್ಪವನ್ನು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹೊಂದಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ರಘುಜಾಣಗೆರೆ ತಿಳಿಸಿದರು.ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲೂ ವೇದಿಕೆಯನ್ನು ಅಸ್ತಿತ್ವಕ್ಕೆ ತಂದು ಲಂಚದ ವಿರುದ್ಧ ಹೋರಾಟಕ್ಕೆ ನಮ್ಮ ವೇದಿಕೆ ಕಾರ್ಯಕರ್ತರು ಅಣಿಯಾಗಿದ್ದಾರೆ ಎಂದರು. ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಇದ್ದು ಜನಸಾಮಾನ್ಯರನ್ನು ಶೋಷಿಸಲಾಗುತ್ತಿದೆ ಎಂಬ ಸಂಗತಿ ತಿಳಿದ ತಮ್ಮ ವೇದಿಕೆಯ ಕಾರ್ಯಕರ್ತರು ಲಂಚ ಪಡೆದ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಕೆಲವು ಸಂದರ್ಭದಲ್ಲಿ ಪ್ರತಿಭಟನೆಯನ್ನು ಮಾಡುವ ಮೂಲಕ ಜನಸಾಮಾನ್ಯರಿಗೆ ನ್ಯಾಯ ಒದಗಿಸಲಾಗಿದೆ ಎಂದರು.

ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುತ್ತಿರುವ ಸಂಬಂಧ ಮಾಹಿತಿ ಹಕ್ಕಿನಡಿ ಮಾಹಿತಿ ಸಂಗ್ರಹಿಸಿ ಒದಗಿಸುವುದು ಹಾಗೂ ಅದರ ಕುರಿತು ಅರಿವು ಮತ್ತು ತರಬೇತಿ ಕೊಡುವುದೂ ಸಹ ತಮ್ಮ ವೇದಿಕೆಯಿಂದ ನಡೆಯಲಿದೆ ಎಂದರು. ಗ್ರಾಮಲೆಕ್ಕಿಗರು ಗ್ರಾಮಗಳಲ್ಲಿ ವಾಸ್ತವ್ಯ ಹೂಡದೇ ಪಟ್ಟಣ ಪ್ರದೇಶಗಳಲ್ಲಿ ತಮ್ಮ ಸರ್ಕಾರಿ ಕೆಲಸಗಳನ್ನು ಮಾಡುತ್ತಿದ್ದಾರೆ. ಇದರಿಂದಾಗಿ ಗ್ರಾಮಾಂತರ ಪ್ರದೇಶದ ಜನರಿಗೆ ತೀವ್ರ ತೊಂದರೆಯಾಗುತ್ತಿದೆ. ಇದರ ವಿರುದ್ಧವೂ ತಮ್ಮ ವೇದಿಕೆ ಹೋರಾಟ ಮಾಡಲಿದೆ ಎಂದು ರಘುಜಾಣಗೆರೆ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಮಿತಿಯ ಸದಸ್ಯ ಶ್ರೀನಿವಾಸ್, ಕುಣಿಗಲ್ ತಾಲೂಕು ಅಧ್ಯಕ್ಷ ಹೆಚ್.ಜಿ. ರಮೇಶ್, ತಾಲ್ಲೂಕು ಅಧ್ಯಕ್ಷ ಪುನಿತ್ ಕುಮಾರ್, ಸದಸ್ಯರಾದ ಲೋಕೇಶ್, ನವೀನ್ ಇತರರು ಇದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin