ಲಕ್ಕಸಂದ್ರ ವಾರ್ಡ್ ಉಪಚುನಾವಣೆ : ನಾಳೆ ಮತ ಎಣಿಕೆ, ನಿಷೇಧಾಜ್ಞೆ ಜಾರಿ

ಈ ಸುದ್ದಿಯನ್ನು ಶೇರ್ ಮಾಡಿ

Lakkasandra

ಬೆಂಗಳೂರು, ನ.22-ಬಿಬಿಎಂಪಿ ವ್ಯಾಪ್ತಿಯ ಲಕ್ಕಸಂದ್ರ ವಾರ್ಡ್ 146ಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆಯು ನಾಳೆ ಆಡುಗೋಡಿ ಠಾಣಾ ವ್ಯಾಪ್ತಿಯ ಮುನಿಚಿನ್ನಪ್ಪ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತ ಎಣಿಕೆ ನಡೆಯುವ ಮುನಿಚಿನ್ನಪ್ಪ ಪ್ರಾಥಮಿಕ ಶಾಲೆಯ 100 ಮೀಟರ್ ಸುತ್ತಮುತ್ತಲ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಗ್ರಾ.ಪಂ. ಮತ ಎಣಿಕೆ: ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು, ಬಾಗಲೂರು ಮತ್ತು ಸಾತನೂರು ಗ್ರಾಮ ಪಂಚಾಯ್ತಿ ಚುನಾವಣೆಯ ಮತ ಎಣಿಕೆಯು ಯಲಹಂಕ ವ್ಯಾಪ್ತಿಯ ಪೆದರ್ ಲೈಟ್ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಾಳೆ ನಡೆಯಲಿದ್ದು, ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತ ಎಣಿಕೆಯು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ನಡೆಯಲು ಅನುಕೂಲವಾಗುವಂತೆ ನಾಳೆ ಬೆಳಗ್ಗೆಯಿಂದ ಮಧ್ಯರಾತ್ರಿ 12ರವರೆಗೆ ಶಾಲೆಯ 100 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಯಾವುದೇ ತರಹದ ಆಯುಧಗಳನ್ನು ಇಟ್ಟುಕೊಂಡು ಓಡಾಡಬಾರದು, ಮೆರವಣಿಗೆ, ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ. ವ್ಯಕ್ತಿಗಳ ಪ್ರತಿಕೃತಿ ಪ್ರದರ್ಶನ ಮಾಡುವುದನ್ನು, ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೆಘರಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin