ಲಯನ್ಸ್ ಸಂಸ್ಥೆಯ ಸಮಾಜ ಮುಖಿ ಕಾರ್ಯ ಶ್ಲಾಘನೀಯ

ಈ ಸುದ್ದಿಯನ್ನು ಶೇರ್ ಮಾಡಿ

loin--club

ಬೇಲೂರು, ಆ.29- ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾದ ಲಯನ್ಸ್ ಸಂಸ್ಥೆಯು ಹಲವು ಸಮಾಜ ಮುಖಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಅಂಧತ್ವ ನಿವಾರಣೆಗೆ ನಮ್ಮ ಸಂಸ್ಥೆಯು ಮುಂದಾಗಿದೆ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ.ಸಂತೋಷ್ ಹೇಳಿದರು.ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಸಮಾಜದ ಪ್ರತಿಯೊಬ್ಬ ನಾಗರಿಕನು ತನ್ನ ದೈನಂದಿನ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳಬೇಕಾದರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಬೇಕು.

ಹಾಗೂ ಪ್ರತಿಯೊಂದು ಜೀವಿಗೂ ಕಣ್ಣು ಬಹು ಮುಖ್ಯವಾಗಿದೆ. ಆದ್ದರಿಂದ ಬಡವರಿಗೆ ಚಿಕಿತ್ಸೆ ಪಡೆಯಲು ಅನುಕೂಲವಾಗಲೆಂದು ನಮ್ಮ ಲಯನ್ಸ್ ಸಂಸ್ಥೆಯು ಉಚಿತವಾಗಿ ಕಣ್ಣಿನ ತಪಾಸಣೆ ಹಾಗೂ ಉಚಿತ ಶಸ್ತ್ರ ಚಿಕಿತ್ಸೆಯನ್ನು ವಿವಿಧ ಆಸ್ಪತ್ರೆಗಳ ಸಹಯೋಗದೊಂದಿಗೆ ಶಿಬಿರವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.  ಮಾಜಿ ಅಧ್ಯಕ್ಷ ಎಂ.ಪಿ.ಪೂವಯ್ಯ ಮಾತನಾಡಿ, ತಾಲೂಕಿನ ಜನರು ಇಂತಹ ಶಿಬಿರಗಳಲ್ಲಿ ಪಾಲ್ಗೊಂಡು ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ತಪಾಸಣಾ ಶಿಬಿರದಲ್ಲಿ 250 ಕ್ಕೂ ಹೆಚ್ಚು ರೋಗಿಗಳನ್ನು ತಪಾಸಣೆ ನಡೆಸಲಾಯಿತು, 75 ಕ್ಕೂ ಹೆಚ್ಚು ಕಣ್ಣಿನ ತೊಂದರೆ ಇರುವವರನ್ನು ಶಸ್ತ್ರ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಯಿತು.ಬೇಲೂರು ಲಯನೆಸ್ ಸಂಸ್ಥೆಯ ಅಧ್ಯಕ್ಷೆ ತಾರಾಮಣಿಸುರೇಶ್, ಲಯನ್ಸ್ ವಲಯಾಧ್ಯಕ್ಷ ದಿನೇಶ್, ಕಾರ್ಯದರ್ಶಿ ಉಮೇಶ್, ಖಜಾಂಚಿ ವಸಂತಕುಮಾರ್, ಪದಾಧಿಕಾರಿಗಳಾದ ರಮೇಶ್‍ಕುಮಾರ್, ಡಾ.ಚಂದ್ರಮೌಳಿ, ಪುಟ್ಟಸ್ವಾಮಿ, ರವಿಕುಮಾರ್, ಹೆಬ್ಬಾಳು ಹಾಲಪ್ಪ, ನೌಷದ್, ಮುಕ್ತಿಯಾರ್, ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಅರುಣ್‍ಕುಮಾರ್, ಶಿವಮೊಗ್ಗದ ಶಂಕರ್ ಕಣ್ಣಿನ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಾಧಿಕ ಹಾಜರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin