ಲಾರಿ-ಬೈಕ್ ನಡುವೆ ಭೀಕರ ಅಪಘಾತ : ಚಲ್ಲಾಪಿಲ್ಲಿಯಾದ ಶವಗಳು

ಈ ಸುದ್ದಿಯನ್ನು ಶೇರ್ ಮಾಡಿ

Accident----01

ಆನೇಕಲ್, ಸೆ.19- ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಚಂದಾಪುರ ಸಮೀಪದ ರೈಲ್ವೆ ಸೇತುವೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ತಾಲ್ಲೂಕಿನ ರಾಮಸಾಗರ ನಿವಾಸಿಗಳಾದ ವೆಂಕಟಪ್ಪ (40) ಮತ್ತು ನಾರಾಯಣಪ್ಪ (38) ಮೃತಪಟ್ಟ ದುರ್ದೈವಿಗಳು.

ವೆಂಕಟಪ್ಪ ಮತ್ತು ನಾರಾಯಣಪ್ಪ ದ್ವಿಚಕ್ರ ವಾಹನದಲ್ಲಿ ಹಳೆ ಚಂದಾಪುರದಿಂದ ಮನೆಗೆ ತೆರಳುತ್ತಿದ್ದಾಗ ಡಿಕ್ಕಿ ಹೊಡೆದಿದ್ದು, ಇಬ್ಬರ ದೇಹ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಗಿ ದೇಹಗಳು ನಜ್ಜುಗುಜ್ಜಾಗಿವೆ. ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯ ಚಕ್ರದಡಿ ಸಿಲುಕಿದ ಮೃತ ದೇಹಗಳನ್ನು ರಸ್ತೆಯಲ್ಲೇ ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ. ನಂತರ ನಜ್ಜುಗುಜ್ಜಾದ ಶವಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟರು. ನಂತರ ಜಾಕ್ ಸಹಾಯದಿಂದ ದೇಹಗಳನ್ನು ಹೊರತೆಗೆಯಲಾಗಿದೆ. ಈ ಸಂಬಂಧ ಸೂರ್ಯನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin