ಲಾರಿ ಮತ್ತು ಟಂಟಂ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01

ಕೊಪ್ಪಳ,ಸೆ.4-ಲಾರಿ ಮತ್ತು ಟಂಟಂ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಹತ್ತು ಕುರಿಗಳು ಕೂಡ ಮೃತಪಟ್ಟಿವೆ. ಮೃತರನ್ನು ಕುಷ್ಟಗಿ ತಾಲ್ಲುಕು ಕಿನ್ನಾಳ ಗ್ರಾಮದ ಮೌಲ್ಯಪ್ಪ(40), ಯಮನೂರಪ್ಪ(44) ಹಾಗೂ ಸಂಗನಾಳ ಗ್ರಾಮದ ಗಣಪತಿ ಬಾಲಪ್ಪ ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನವರು. ಸಮೀಪದ ಉಮಲೂಟಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಇವರು ಟಂಟಂ ವಾಹನದಲ್ಲಿ ಕುರಿಗಳನ್ನು ತುಂಬಿಕೊಂಡು ಕಿನ್ನಾಳದಿಂದ ಸಿಂಧನೂರು ಕುರಿ ಸಂತೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಟಂಟಂ ವಾಹನ ಉಮಲೂಟಿ ಗ್ರಾಮದ ಬಳಿ ಬಂದಾಗ ಭತ್ತದ ಹೊಟ್ಟು ತುಂಬಿಕೊಂಡು ಬರುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ತುರವಿಹಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳನ್ನು ಸಿಂಧನೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Facebook Comments

Sri Raghav

Admin