ಲಾರಿ, ಲಗೇಜ್ ಆಟೋ ನಡುವೆ ಅಪಘಾತ : ಓರ್ವ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

deadly--accident

ನೆಲಮಂಗಲ,ಸೆ.29-ಲಾರಿ ಮತ್ತು ಲಗೇಜ್ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನೆಲಮಂಗಲದ ನವಯುಗ ಟೋಲ್ ಬಳಿ ನಡೆದಿದೆ. ಮೃತನನ್ನು ಲಗೇಜ್ ಆಟೋಸದಲ್ಲಿದ್ದ ಚನ್ನರಾಯಪಟ್ಟಣ ಬಳಗಟ್ಟೆಕೊಪ್ಪಲು ಗ್ರಾಮದ ನಿವಾಸಿ ಚಿದಾನಂದ(35) ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಬೆಳೆದಿದ್ದ ತರಕಾರಿಗಳನ್ನು ಟಾಟಾ ಏಸ್‍ನಲ್ಲಿ ತುಂಬಿಕೊಂಡು ಯಶವಂತಪುರ ಮಾರ್ಕೆಟ್‍ಗೆ ತರುವಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೆಲಮಂಗಲ ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಲಾರಿ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin