ಲಾರಿ ಹಾಗೂ ಬೊಲೆರೋ ನಡುವೆ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

deadly--accident

ವಿಜಯಪುರ ನ. 11 : ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮತ್ತಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಲಾರಿ ಹಾಗೂ ಬೊಲೆರೋ ವಾಹನಗಳ ನಡುವೆ, ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮುತ್ತಗಿ ಕ್ರಾಸ್ ಸಮೀಪ ವೇಗವಾಗಿದ್ದ ಲಾರಿ ಎದುರಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಬೊಲೆರೋ ಚಾಲಕ ಅಪಘಾತಕ್ಕೀಡಾದ ವಾಹನದಲ್ಲಿ ಸಿಲುಕಿದ್ದು, ಆತನನ್ನು ಪಾರುಮಾಡಲು ಕಾರ್ಯಾಚರಣೆ ನಡೆಸಲಾಗಿದೆ.  ಬೊಲೆರೊದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಸೊಲ್ಲಾಪುರದಿಂದ ರಾಮನಗರಕ್ಕೆ ರೇಷ್ಮೆಗೂಡುಗಳನ್ನು ಸಾಗಿಸುತ್ತಿದ್ದ ಬೊಲೆರೋದಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin