ಲಿಂಗಸೂಗೂರಿನಲ್ಲಿ ಬಿಜೆಪಿ ಕಾರ್ಯಕರ್ತಗೆ ಚಾಕು ಇರಿತ

ಈ ಸುದ್ದಿಯನ್ನು ಶೇರ್ ಮಾಡಿ

Murder-knif

ರಾಯಚೂರು, ಆ.21- ಬಿಜೆಪಿ ಕಾರ್ಯಕರ್ತ ರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಲಿಂಗಸೂರು ತಾಲ್ಲೂಕು ಮಂಡಲ ಉಪಾಧ್ಯಕ್ಷ ಬಿ.ಎಸ್.ನಾಯಕ ಎಂಬುವವರ ಮೇಲೆ ಹೈದರ್ ಮತ್ತು ಹೈಮದ್ ಎಂಬ ವ್ಯಕ್ತಿಗಳಿಬ್ಬರೂ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ.  ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ನಾಯಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸೂರು ತಾಲ್ಲೂಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin