ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಪೇಜಾವರ ಶ್ರೀಗಳ ಹಸ್ತಕ್ಷೇಪ ಅಗತ್ಯವಿಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

Pejavar-Shree-MB-Patil

ಬೆಂಗಳೂರು, ಜು.25-ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮದ ಅಗತ್ಯವಿಲ್ಲ ಎಂಬ ಪೇಜಾವರ ಶ್ರೀಗಳ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಇದು ನಮ್ಮ ಸಮುದಾಯಕ್ಕೆ ಸಂಬಂಧಿಸಿದ ವಿಷಯ. ಪೇಜಾವರ ಶ್ರೀಗಳ ಹಸ್ತಕ್ಷೇಪ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮಾಜದ ಮುಖಂಡರು, ಸ್ವಾಮೀಜಿಗಳು ಈ ಸಂಬಂಧ ನಿರ್ಧರಿಸಲಿದ್ದಾರೆ. ಇದರಲ್ಲಿ ಪೇಜಾವರ ಶ್ರೀಗಳು ಮಧ್ಯಪ್ರವೇಶಿಸುವ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾರೆ. ಬೌದ್ಧ, ಸಿಖ್ ಧರ್ಮಗಳಂತೆ ಬಸವ ಧರ್ಮ ಜಾಗತಿಕ ಧರ್ಮವಾಗಬೇಕಿದೆ. ಆರ್‍ಎಸ್‍ಎಸ್ ಬೆಂಬಲಿತರ್ಯಾರೂ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬಾರದು.

ಆರ್‍ಎಸ್‍ಎಸ್ ಒತ್ತಡಕ್ಕೆ ಮಣಿದು ನಮ್ಮದೇ ಸಮುದಾಯದವರಾದ ಯಡಿಯೂರಪ್ಪ ಏನೇನೋ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತೂ ಧರ್ಮವನ್ನು ಒಡೆಯುವ ಕೆಲಸವನ್ನು ಮಾಡುತ್ತಿಲ್ಲ. ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಬೇಕೆಂದು ಈ ಹಿಂದೆಯೇ ಚರ್ಚೆ ನಡೆದಿತ್ತು. ವೀರಶೈವ ಮಹಾಸಭಾದವರು ಮುಖ್ಯಮಂತ್ರಿಗಳಿಗೆ ಈ ಸಂಬಂಧ ಮನವಿ ನೀಡಿದ್ದಾರೆ ಹೊರತು ಸಿದ್ದರಾಮಯ್ಯನವರು ಈ ವಿಷಯ ಪ್ರಸ್ತಾಪಿಸಿಲ್ಲ ಎಂದರು.

ಆದರೆ ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದಕ್ಕೆ ನಾವೆಲ್ಲ ಒಗ್ಗಟ್ಟಾಗಿ ಉತ್ತರ ಕೊಡಬೇಕಿದೆ. ಪ್ರತ್ಯೇಕ ಧರ್ಮದ ಅಗತ್ಯತೆ, ಅನಿವಾರ್ಯತೆ ನಮಗಿದೆ. ಇದು ದೊರೆತರೆ ಬೇರೆ ಸೌಲಭ್ಯಗಳು ಸಿಗುವ ಸಾಧ್ಯತೆ ಇದೆ. ಅನಗತ್ಯವಾಗಿ ಆರ್‍ಎಸ್‍ಎಸ್‍ನವರು ಗೊಂದಲ ಸೃಷ್ಟಿಸುವುದನ್ನು ಕೈಬಿಡಬೇಕು ಎಂದು ಅವರು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin