ಲಿಂಗಾಯಿತರ ಬಗ್ಗೆ ಮೋದಿ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ : ಹರಿಪ್ರಸಾದ್

ಈ ಸುದ್ದಿಯನ್ನು ಶೇರ್ ಮಾಡಿ

Hariprasad

ಬಳ್ಳಾರಿ, ಫೆ.10- ರಾಜ್ಯದ 9 ಮಂದಿ ಲಿಂಗಾಯಿತ ಸಮುದಾಯದ ಸಂಸದರಿದ್ದರೂ ಅವರಲ್ಲಿ ಒಬ್ಬರನ್ನೂ ಮಂತ್ರಿ ಮಾಡದೆ ಒಂದೇ ಸಮುದಾಯದ ಮೂರು ಮಂದಿಯನ್ನು ಸಂಪುಟಕ್ಕೆ ತೆಗೆದುಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗ ಲಿಂಗಾಯಿತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಆರೋಪಿಸಿದರು.

ಬಳ್ಳಾರಿ ಜಿಲ್ಲೆ ಹೊಸಪೇಟೆಯ ಮುನ್ಸಿಪಾಲ್ ಕಾಲೇಜು ಮೈದಾನದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಿಂದ ಕೇಂದ್ರ ಸಂಪುಟದಲ್ಲಿ ಅನಂತ್‍ಕುಮಾರ್ ಹೆಗಡೆ, ಅನಂತ್‍ಕುಮಾರ್ ಮತ್ತು ನಿರ್ಮಲಾಸೀತಾರಾಮ್ ಸಚಿವರಾಗಿದ್ದು, ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಬಸವಣ್ಣ ಹಾಗೂ ಅನುಭವ ಮಂಟಪವನ್ನು ಸ್ಮರಿಸಿಕೊಂಡು ಲಿಂಗಾಯಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸಿರುವ ಮೋದಿ ಅವರು, ಲಿಂಗಾಯಿತ ಸಮುದಾಯದ ಒಬ್ಬರನ್ನೂ ಏಕೆ ಸಚಿವರನ್ನಾಗಿ ಮಾಡಿಲ್ಲ ಎಂದು ಪ್ರಶ್ನಿಸಿದರು.

ಕರಾವಳಿ ಭಾಗದಲ್ಲಿ ಇತ್ತೀಚೆಗೆ ರಾಜಕೀಯ ಕಾರಣಕÉ್ಕ 23 ಕೊಲೆಗಳಾಗಿವೆ. ಅದರಲ್ಲಿ 14 ಕೊಲೆಗಳನ್ನು ಹಿಂದುಗಳೇ ಮಾಡಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಈ ಮೊದಲು ವಿದೇಶಗಳಿಂದ ಯಾರೇ ಆಗಮಿಸಿದರೂ ಮೊದಲು ಬೆಂಗಳೂರಿಗೆ ಭೇಟಿ ನೀಡುತ್ತಿದ್ದರು. ಆದರೆ, ಇತ್ತೀಚೆಗೆ ಪ್ರಧಾನಮಂತ್ರಿ ಮೋದಿ ಅವರು ವಿದೇಶಗಳಿಂದ ಗಣ್ಯರು ಬಂದರೆ ಅವರನ್ನು ಬಲವಂತವಾಗಿ ಗುಜರಾತ್‍ಗೆ ಕರೆದುಕೊಂಡು ಹೋಗುತ್ತಿದ್ದಾರೆ. ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದ ಮೋದಿ ಯಾವ ಭರವಸೆಗಳನ್ನೂ ಈಡೇರಿಸಲಿಲ್ಲ ಎಂದು ಹೇಳಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಮಾತನಾಡಿ, ಸಿದ್ದರಾಮಯ್ಯ ಅವರ ಸರ್ಕಾರ ನೀಡಿರುವ ಕೊಡುಗೆಗಳ ಬಗ್ಗೆ ವಿವರಿಸಿದರು.

ಮಾಜಿ ಸಚಿವ ಅಂಬರೀಶ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ದಾರ್ ವಲ್ಲಭಬಾಯಿಪಟೇಲರನ್ನು ಕಾಂಗ್ರೆಸ್ ಮೂಲೆಗುಂಪು ಮಾಡಿದೆ ಎಂದು ಆರೋಪಿದ್ದಾರೆ. ಆದರೆ, ಮೋದಿ ಮಾತನಾಡುವಾಗ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಕೂಳಿತಿದ್ದ ಸ್ಥಿತಿ ನೋಡಿದರೆ ಅಯ್ಯೋ ಎನಿಸುವಂತಿತ್ತು, ಅಡ್ವಾಣಿಯಂತ ಹಿರಿಯ ನಾಯಕರನ್ನು ಮೂಲೆ ಗುಂಪು ಮಾಡಿರುವ ಮೋದಿ ಅವರು ನಮ್ಮ ಪಕ್ಷದ ಬಗ್ಗೆ ಟೀಕೆ ಮಾಡುತ್ತಾರೆ ಎಂದು ಲೇವಡಿ ಮಾಡಿದರು.
ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್, ಸಚಿವರಾದ ರೋಷನ್‍ಬೇಗ್, ಡಿ.ಕೆ.ಶಿವಕುಮಾರ್, ಸಂತೋಷ್‍ಲಾಡ್, ಎಚ್.ಕೆ.ಪಾಟೀಲ್, ಎಚ್.ಆಂಜನೇಯ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್, ರಾಜ್ಯ ನಾಯಕರಾದ ಎಂ.ವೀರಪ್ಪಮೊಯ್ಲಿ, ರಾಷ್ಟ್ರೀಯ ನಾಯಕರಾದ ಆಸ್ಕರ್ ಫರ್ನಾಂಡೀಸ್, ಮಾಜಿ ಸಚಿವ ಅಲ್ಲಮ್ ವೀರಭದ್ರಪ್ಪ, ವಿಧಾನಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ಮುಖಂಡರಾದ ಅನಿಲ್‍ಲಾಡ್, ಆನಂದ್‍ಸಿಂಗ್ ಮತ್ತಿತರರು ಹಾಜರಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin