ಲೆಕ್ಕ ಕೊಡದ ಪಟ್ಟಣ ಪಂಚಾಯಿತಿ ಸದಸ್ಯೆಯನ್ನು ಅನರ್ಹಗೊಳಿಸಿದ ಚುನಾವಣಾ ಆಯೋಗ

ಈ ಸುದ್ದಿಯನ್ನು ಶೇರ್ ಮಾಡಿ

Bhatkal--01

ಉತ್ತರ ಕನ್ನಡ, ಮೇ 4- ಚುನಾವಣಾ ಲೆಕ್ಕ ಕೊಡದೆ ನಿರ್ಲಕ್ಷ್ಯ ವಹಿಸಿದ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರನ್ನು ಚುನಾವಣಾ ಆಯೋಗ ಅನರ್ಹಗೊಳಿಸಿದೆ. ಉತ್ತರಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ಸದಸ್ಯೆ ಪಾರ್ವತಿ ನಾಯ್ಕ್ ಅವರನ್ನು ಮೂರು ವರ್ಷಗಳ ಕಾಲ ಚುನಾವಣಾ ಆಯೋಗ ಅನರ್ಹಗೊಳಿಸಿ ಆದೇಶಿಸಿದೆ.  ಚುನಾವಣೆ ಸಂದರ್ಭದಲ್ಲಿ ನಿಗದಿಗೊಳಿಸಿದ ಖರ್ಚಿನ ಲೆಕ್ಕವನ್ನು ಆಯೋಗಕ್ಕೆ ನಿಗದಿತ ಅವಧಿಗೆ ಸಲ್ಲಿಸಬೇಕಾಗಿತ್ತು. ಆದರೆ, ಇವರು ಸಲ್ಲಿಸದೆ ನಿರ್ಲಕ್ಷ್ಯ ವಹಿಸಿದ್ದರು. ಆಯೋಗದ ಅಧಿಕಾರಿಗಳು ಲೆಕ್ಕ ಸಲ್ಲಿಸುವಂತೆ ಮೂರು ಬಾರಿ ನೋಟಿಸ್ ಕೂಡ ನೀಡಿದ್ದರಾದರೂ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಸದಸ್ಯತ್ವವನ್ನು ಅನರ್ಹಗೊಳಿಸಿದೆ.ಬೇರೆ ಜನಪ್ರತಿನಿಧಿಗಳಿಗೆ ಇದು ಎಚ್ಚರಿಕೆಯ ಗಂಟೆಯಾಗಿದೆ. ನಿಗದಿತ ಅವಧಿಯಲ್ಲಿ ಚುನಾವಣಾ ಆಯೋಗಕ್ಕೆ ಸರಿಯಾಗಿ ಲೆಕ್ಕ ಸಲ್ಲಿಸದಿದ್ದರೆ ಜನಪ್ರತಿನಿಧಿಗಳ ಸದಸ್ಯತ್ವ ಅನರ್ಹಗೊಳ್ಳುವುದರಲ್ಲಿ ಅನುಮಾನವಿಲ್ಲ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin