ಲೈಂಗಿಕ ಕಿರುಕುಳ ಪ್ರಕರಣ : ನಟ ದಿಲೀಪ್ ಜಾಮೀನು ಅರ್ಜಿ ವಜಾ

ಈ ಸುದ್ದಿಯನ್ನು ಶೇರ್ ಮಾಡಿ

Dilip

ಕೊಚ್ಚಿ, ಜು.24- ದಕ್ಷಿಣ ಭಾರತದ ಖ್ಯಾತ ನಟಿ ಮೇಲೆ ಫೆ.17ರಂದು ನಡೆದ ಅಪಹರಣ, ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಸಿದ್ಧ ಮಲೆಯಾಳಂ ನಟ ದಿಲೀಪ್ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಇಂದು ವಜಾಗೊಳಿಸಿದೆ. ಇದರೊಂದಿಗೆ ದಿಲೀಪ್ ಕೊರಳಿಗೆ ಸುತ್ತಿಕೊಂಡಿರುವ ಕಾನೂನಿನ ಉರುಳು ಮತ್ತಷ್ಟು ಬಿಗಿಯಾದಂತಾಗಿದೆ.  ನಟ ದಿಲೀಪ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸುನಿಲ್ ಥಾಮಸ್, ಈ ಪ್ರಕರಣದಲ್ಲಿ ತನಿಖೆ ಮುಂದುವರಿಯುತ್ತಿದೆ ಹಾಗೂ ಈ ಪ್ರಕರಣದಲ್ಲಿ ಅತ್ಯಂತ ಪ್ರಮುಖ ಸಾಕ್ಷ್ಯಾಧಾರವಾಗಿದೆ ಎನ್ನಲಾದ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ ಎಂದು ಪ್ರಾಸಿಕ್ಯೂಷನ್ ಹೇಳಿದೆ ಎಂಬ ಅಂಶವನ್ನು ಉಲ್ಲೇಖಿಸಿದರು.

ಈ ಪ್ರಕರಣದ ಹಿಂದೆ ಆರೋಪಿಯ ವಿರುದ್ಧ ದಾಖಲಾಗಿರುವ ಒಳಸಂಚು ಕುರಿತು ತನಿಖೆ ನಡೆಯುತ್ತಿದೆ. ನೇರ ಸಾಕ್ಷ್ಯಾಧಾರದ ಮೂಲಕ ಇನ್ನು ಸಾಬೀತು ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.   ಆರೋಪಿಯು ಅತ್ಯಂತ ಪ್ರಭಾವಿಯಾಗಿದ್ದು, ಈ ಹಂತದಲ್ಲಿ ಆತನಿಗೆ ಜಾಮೀನು ನೀಡಿದರೆ ಸಾಕ್ಷ್ಯಾಧಾರವನ್ನು ನಾಶಪಡಿಸುವ ಸಾಧ್ಯತೆ ಇದೆ ಎಂದು ಹೈಕೋರ್ಟ್ ಹೇಳಿದೆ.

ನಟಿ ಮೇಲೆ ನಡೆದ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣದ ಸಂಬಂಧ ಜುಲೈ 10ರಂದು ನಟ ದಿಲೀಪ್‍ನನ್ನು ಬಂಧಿಸಲಾಗಿತ್ತು. ತಮಗೆ ಜಾಮೀನು ನೀಡಬೇಕೆಂದು ಕೋರಿ ಆತ ಸಲ್ಲಿಸಿದ್ದ ಅರ್ಜಿಯನ್ನು ಅಂಗಮಲಿ ದಂಡಾಧಿಕಾರಿಯವರ ನ್ಯಾಯಾಲಯ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ದಿಲೀಪ್ ಹೈಕೋರ್ಟ್ ಮೊರೆ ಹೋಗಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin