ಲೈಂಗಿಕ ದೌರ್ಜನ್ಯ ಕ್ಷಮಾರ್ಹವಲ್ಲ, ಸೇನಾಪಡೆಗಳಿಗೆ ಕೇಂದ್ರ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

UN--01

ನವದೆಹಲಿ, ಜೂ.5-ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣವನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಕೇಂದ್ರ ಸರ್ಕಾರ, ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಅರೆಸೇನಾ ಪಡೆ ಸಿಬ್ಬಂದಿಗೆ ಗಂಭೀರ ಎಚ್ಚರಿಕೆ ನೀಡಿದೆ.  ಕೇಂದ್ರೀಯ ಪಡೆಗಳಿಗೆ ಕೇಂದ್ರ ಗೃಹ ಸಚಿವಾಲಯವು ಇಂಥದ್ದೊಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವುದು ಬಹುಶಃ ಇದೇ ಮೊದಲು. ಯುಎನ್ ಪೀಸ್ ಕೀಪಿಂಗ್ ಪೋರ್ಸ್‍ನ ಕೆಲವು ಯೋಧರು ಹೈಟಿ ದೇಶದ ಕೆಲವೆಡೆ ಮಕ್ಕಳ ವೇಶ್ಯಾವಾಟಿಕೆ ಜಾಲದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಎಚ್ಚರಿಕೆ ನೀಡಿದೆ.ಕಳೆದ 10 ವರ್ಷಗಳಿಂದ ಈ ದಂಧೆ ನಡೆಯುತ್ತಿದ್ದರೂ ಈವರೆಗೆ ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ ಎಂಬ ವರದಿಗಳನ್ನು ಗೃಹ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ.  ಲೈಂಗಿಕ ದೌರ್ಜನ್ಯ, ಕಿರುಕುಳ, ಮಹಿಳೆಯರೊಂದಿಗೆ ಅನುಚಿತ ವರ್ತನೆಯಂಥ ಪ್ರಕರಣಗಳು ಕಂಡುಬಂದಲ್ಲಿ ಅಂಥ ಯೋಧರನ್ನು ವಜಾಗೊಳಿಸಿ ಕಾರಾಗೃಹ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.   ಸಮಾಧಾನ ಸಂಗತಿ ಎಂದರೆ, ವಿಶ್ವಸಂಸ್ಥೆಯ ಶಾಂತಿ ಸ್ಥಾಪನೆ ಕಾರ್ಯಾಚರಣೆಗಳಲ್ಲಿ ಎಲ್ಲಿಯೂ ಭಾರತೀಯ ಯೋಧರು ಲೈಂಗಿಕ ದೌರ್ಜನ್ಯ ಅಥವಾ ದುರಾಚಾರ ಪ್ರಕರಣಗಳಲ್ಲಿ ಶಾಮೀಲಾಗಿರುವುದು ಕಂಡುಬಂದಿಲ್ಲ. ವಿಶ್ವಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ಪ್ರಸ್ತುತ 6,000ಕ್ಕೂ ಹೆಚ್ಚು ಭಾರತೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಭಾರತೀಯ ಸಿಬ್ಬಂದಿ ಇಂಥ ಯಾವುದೇ ಕೃತ್ಯಗಳಲ್ಲಿ ಭಾಗಿಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಆರ್ ಪಿಎಫ್, ಬಿಎಸ್‍ಎಫ್, ಸಿಐಎಸ್‍ಎಫ್ ಮತ್ತು ಐಟಿಬಿಪಿ ವಿಭಾಗಗಳ ಮುಖ್ಯಸ್ಥರಿಗೆ ಈ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವಾಲಯದ ಉನ್ನತಾಧಿಕಾರಿಗಳು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin