ಲೋಕಾಯುಕ್ತಕ್ಕೆ ನ್ಯಾಸಿ.ವಿಶ್ವನಾಥ್ ಶೆಟ್ಟಿ ಹೆಸರು ಅಂತಿಮ

ಈ ಸುದ್ದಿಯನ್ನು ಶೇರ್ ಮಾಡಿ

lOKAYUKTA

ಬೆಂಗಳೂರು,ಜ.9-ರಾಜ್ಯ ಲೋಕಾಯುಕ್ತಕ್ಕೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಿ.ವಿಶ್ವನಾಥ್ ಶೆಟ್ಟಿ ಅವರನ್ನು ನೇಮಿಸಲು ಉನ್ನತಾಧಿಕಾರ ಸಮಿತಿ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಹೈಕೋರ್ಟ್ ಹಾಲಿ ನ್ಯಾಯಮೂರ್ತಿ ಆನಂದ್ ಬೈರಾರೆಡ್ಡಿ, ನಿವೃತ್ತ ನ್ಯಾಯಮೂರ್ತಿ ಎನ್.ಕೆ.ಪಾಟೀಲ್ ಹಾಗೂ ಸಿ.ವಿಶ್ವನಾಥ್ ಶೆಟ್ಟಿ ಅವರ ಹೆಸರು ಪ್ರಸ್ತಾಪವಾಯಿತು.  ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವನಾಥ್ ಶೆಟ್ಟಿ ಪರ ಒಲವು ತೋರಿದ್ದು , ಇದಕ್ಕೆ ವಿರೋಧ ಪಕ್ಷಗಳು ಸಹಮತ ವ್ಯಕ್ತಪಡಿಸಿದವು.  ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಈ ಮೂವರಲ್ಲಿ ಯಾರನ್ನು ನೇಮಿಸಿದರೆ ಸೂಕ್ತ ಆಯ್ಕೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಿ.ವಿಶ್ವನಾಥ್ ಶೆಟ್ಟಿ ಅವರು ಮಂಗಳೂರು ಮೂಲದವರಾಗಿದ್ದು , ರಾಜ್ಯ ಹೈಕೋರ್ಟ್‍ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದು, ಸುಪ್ರೀಂಕೋರ್ಟ್‍ನ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Lokayujta

ಇಂದು ನಡೆದ ಸಭೆಯಲ್ಲಿ ಮೂರು ಹೆಸರುಗಳು ಪ್ರಸ್ತಾಪವಾಗಿದ್ದು, ಹೆಚ್ಚಿನ ವಾದ-ವಿವಾದ ನಡೆಯದೆ ವಿಶ್ವನಾಥ್ ಶೆಟ್ಟಿ ಅವರ ಹೆಸರು ಅಂತಿಮಗೊಂಡಿದೆ.  ಬಿಜೆಪಿ ಪಾಳೆಯದಲ್ಲಿ ಈ ಪ್ರಸ್ತಾಪಕ್ಕೆ ಸಹಮತ ವ್ಯಕ್ತವಾಗಿದ್ದರಿಂದ ಸಭೆ ಸುಲಲಿತವಾಗಿ ನಡೆಯಿತು.  ಸುಮಾರು ಒಂದೂವರೆ ವರ್ಷಗಳಿಂದ ಖಾಲಿ ಉಳಿದಿದ್ದ ಲೋಕಾಯುಕ್ತ ಹುದ್ದೆ ನೇಮಕಾತಿಗೆ ಕಾಲ ಕೂಡಿ ಬಂದಿದ್ದು , ಇಂದಿನ ಸಭೆಯ ಪ್ರಕ್ರಿಯೆಗಳನ್ನು ಆಧರಿಸಿ ರಾಜ್ಯ ಸರ್ಕಾರ ರಾಜ್ಯಪಾಲರಿಗೆ ವಿಶ್ವನಾಥ್ ಶೆಟ್ಟಿ ಅವರ ಹೆಸರನ್ನು ಶಿಫಾರಸು ಮಾಡುವ ಸಾಧ್ಯತೆಗಳಿವೆ.

ಸಭೆಯಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ, ಸಭಾಪತಿ ಡಿ.ಎಚ್.ಶಂಕರಮೂರ್ತಿ, ವಿರೋಧ ಪಕ್ಷದ ನಾಯಕರಾಗಿ ಜಗದೀಶ್ ಶೆಟ್ಟರ್, ಈಶ್ವರಪ್ಪ ಉಪಸ್ಥಿತರಿದ್ದರು.  ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಡೆದ ಸಭೆಯಲ್ಲಿ ಲೋಕಾಯುಕ್ತರ ಹುದ್ದೆಗೆ ವಿಶ್ವನಾಥ್ ಶೆಟ್ಟಿಯವರ ಹೆಸರನ್ನು ಅಂತಿಮಗೊಳಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin