ಲೋಕಾಯುಕ್ತ ದಲ್ಲಿ ತಮ್ಮ ವಿರುದ್ಧ ಪ್ರಕರಣಗಳು ಬಾಕಿ ಉಳಿದಿರುವ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ನಕಾರ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-01

ಬೆಂಗಳೂರು, ಮೇ 25- ಲೋಕಾಯುಕ್ತ ಸಂಸ್ಥೆಯಲ್ಲಿ ತಮ್ಮ ವಿರುದ್ಧ ಪ್ರಕರಣಗಳು ಬಾಕಿ ಉಳಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದರು.  ಗೃಹ ಕಚೇರಿ ಕೃಷ್ಣಾದಲ್ಲಿ ಕಳೆದ ಮೂರು ವರ್ಷಗಳಿಂದ ಲೋಕಾಯುಕ್ತ ಹುದ್ದೆ ಖಾಲಿ ಬಿಟ್ಟಿದ್ದಕ್ಕಾಗಿ ಹಲವಾರು ಪ್ರಕರಣ ಬಾಕಿ ಉಳಿದಿವೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿದ್ದರಾಮಯ್ಯ ಎಲ್ಲ ಆರೋಪ, ಹೇಳಿಕೆಗಳಿಗೂ ಉತ್ತರಿಸುತ್ತಾ ಕೂರಲು ಆಗುವುದಿಲ್ಲ ಎಂದು ಸಿಡಿಮಿಡಿಗೊಂಡರು.




ತಮ್ಮ ವಿರುದ್ಧ ಪ್ರಕರಣಗಳು ಬಾಕಿ ಇದ್ದರೆ ಅವುಗಳ ವಿಷಯದಲ್ಲಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇದರಲ್ಲಿ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟಪಡಿಸಿದರು.  ಕಳೆದ ನಾಲ್ಕು ವರ್ಷಗಳಿಂದ ಸಿದ್ದರಾಮಯ್ಯ ವಿರುದ್ಧ ಸುಮಾರು 56 ಪ್ರಕರಣಗಳು ಲೋಕಾಯುಕ್ತದಲ್ಲಿ ದಾಖಲಾಗಿದ್ದು, 43 ಪ್ರಕರಣಗಳು ಇನ್ನೂ ಇತ್ಯಾರ್ಥವಾಗದೆ ಬಾಕಿ ಉಳಿದಿವೆ. ಇದಕ್ಕೆ ಲೋಕಾಯುಕ್ತರನ್ನು ನೇಮಿಸದೇ ಇರುವುದೇ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸುದ್ದಿಗಾರರು ಪ್ರಶ್ನಿಸುತ್ತಿದ್ದಂತೆ ಮುಖ್ಯಮಂತ್ರಿಗಳು ಸಿಡಿಮಿಡಿಯಾದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin